

ಬೈಲಹೊಂಗಲ: ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ಸದಸ್ಯರು ಬುಧವಾರ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಮನವಿ ಸಲ್ಲಿಸಿದರು.
ನೌಕರರ ಸಂಘದ ತಾಲೂಕು ಘಟಕ ಅಧ್ಯಕ್ಷ ಶಿವಾನಂದ ಕುಡಸೋಮನ್ನವರ ಮಾತನಾಡಿ, 2017ರಲ್ಲಿ ಹೊಸ ವೃಂದ ಹಾಗೂ ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯ ಮಾಡದೆ ಸೇವಾನಿರತ ಶಿಕ್ಷಕರಿಗೆ ನ್ಯಾಯ ಒದಗಿಸಬೇಕು. ಸೇವಾ ಜ್ಯೇಷ್ಠತೆ ಆಧಾರ ಮೇಲೆ ಮುಖ್ಯಶಿಕ್ಷಕರ ಹುದ್ದೆಗೆ ಬಡ್ತಿ ನೀಡಬೇಕು ಎಂದು ಅಗ್ರಹಿಸಿದರು.
ಎಸ್.ಡಿ.ಗಂಗನ್ನವರ, ಬಿ.ಎಸ್. ಕೀರಸ್ವಾಮಿಮಠ, ಚಂದ್ರಶೇಖರ ಭಜಂತ್ರಿ, ರುದ್ರಪ್ಪ ಚಲವಾದಿ, ಇಸ್ಮಾಯಿಲ್ ತಿಗಡಿ ಹಾಗೂ ನೌಕರರ ಸಂಘದ ಸದಸ್ಯರು ಹಾಗೂ ಶಿಕ್ಷಕರು ಇದ್ದರು.