

ಕೋಲಾರ: ಅರ್ಹ ಲಾನುಭವಿಗಳು ಗ್ಯಾರಂಟಿ ಯೋಜನೆಗಳಿಂದ ವಂಚನೆಗೆ ಒಳಗಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ವೈ.ಶಿವಕುಮಾರ್ ಹೇಳಿದರು.
ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವ ಬಗ್ಗೆ ಜನತೆಗೆ ಅರಿವಿದೆ. ಸೌಲಭ್ಯ ದೊರೆಯದೆ ಇರುವವರಿಂದ ದೂರುಗಳು ಬರುತ್ತಿದ್ದು, ಅಧಿಕಾರಿಗಳು ಗಮನ ಹರಿಸಬೇಕು ಎಂದರು.
ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಸಾವಿರಾರು ಕೋಟಿ ರೂ. ಖರ್ಚು ಮಾಡುತ್ತಿದೆ. ಗೃಹಲಕ್ಷಿ$್ಮ, ಅನ್ನಭಾಗ್ಯ ಯೋಜನೆಗಳ ಮೂಲಕ ಜಿಲ್ಲೆಯಲಕ್ಷಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರ ಹಣ ವರ್ಗಾವಣೆ ಮಾಡಲಾಗುತ್ತಿದೆ. ತಾಂತ್ರಿಕ ದೋಷದಿಂದ ಖಾತೆಗೆ ಜಮಾ ಆಗದೆ ಇರುವ ಬಗ್ಗೆ ಲಾನುಭವಿಗಳಿಗೆ ತಿಳಿ ಹೇಳಿ, ದೋಷ ಸರಿಪಡಿಸಬೇಕು ಎಂದು ತಿಳಿಸಿದರು.
ಪ್ರತಿ ತಿಂಗಳು ಶಕ್ತಿ ಯೋಜನೆಯಡಿ ಪ್ರಯಾಣಿಸಿದ ಮಹಿಳಾ ಫಲಾನುಭವಿಗಳು ಹಾಗೂ ಸರ್ಕಾರದಿಂದ ಪಾವತಿಸಿದ ಮೊತ್ತದ ವಿವರ ಕ್ರೂಢಿಕರಿಸಿ ಕೆಎಸ್ಆರ್ಟಿಸಿ ಅಧಿಕಾರಿಗಳು ಪ್ರಚುರ ಪಡಿಸಬೇಕು. ಗ್ಯಾರಂಟಿ ಯೋಜನೆಗಳ ಕುರಿತು ಬಸ್ ನಿಲ್ದಾಣಗಳಲ್ಲಿ ಆಡಿಯೋ ಹಾಗೂ ವಿಡಿಯೋ ಜಿಂಗಲ್ಸ್ಗಳನ್ನು ಪ್ರದರ್ಶಿಸಲು ಕ್ರಮಕೈಗೊಳ್ಳಬೇಕು ಎಂದರು.
ಗೃಹಜ್ಯೋತಿ ಯೋಜನೆ ಫಲಾನುಭವಿಗಳ ವಿವರ ಹಾಗೂ ಯೋಜನೆಯಡಿ ಇದರವರೆಗೂ ಸರ್ಕಾರದಿಂದ ಭರಿಸಿರುವ ಒಟ್ಟು ಮೊತ್ತದ ವಿವರ ಬೆಸ್ಕಾಂ ಕಚೇರಿಗಳ ಸೂಚನಾ ಫಲಕದಲ್ಲಿ ಪ್ರಕಟಿಸಬೇಕು.ಇದರೊಂದಿಗೆ ಬೆಸ್ಕಾಂ ಮಾಹಿತಿ ಶಿಕ್ಷಣ ಕಾರ್ಯಕ್ರಮಗಳಲ್ಲಿ ಕೂಡ ಯೋಜನೆ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು.ಯುವನಿಧಿ ಯೋಜನೆಯು ಜಿಲ್ಲೆಯಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕಿದೆ. ಪದವಿ ಹಾಗೂ ಡಿಪ್ಲೋಮೋ ಕಾಲೇಜುಗಳಲ್ಲಿ ಜಾಗೃತಿ ಆಂದೋಲನ ಏರ್ಪಡಿಸಬೇಕು. ಹೆಚ್ಚು ಯುವಕರು ಯುವನಿಧಿಯ ಸೌಲಭ್ಯ ಪಡೆದುಕೊಳ್ಳುವಂತೆ ಪ್ರೇರೇಪಿಸಬೇಕು, ಕೆಲಸಗಳು ಲಭ್ಯವಿರುವ ಕಂಪನಿಗಳಿಗೆ ಸೇರಲು ಜಾಗೃತಿ ಮೂಡಿಸಬೇಕು ಎಂದರು.
ಸೌಲಭ್ಯಗಳನ್ನು ಪಡೆದುಕೊಳ್ಳದೆ ಇರುವವರನ್ನು ಗುರುತಿಸಿ ಯೋಜನೆಯಡಿ ನೋಂದಣಿ ಮಾಡಲು ಕ್ರಮ ಕೈಗೊಳ್ಳಬೇಕು.10 ದಿನಗಳ ಒಳಗೆ ನೋಂದಣಿಯಾಗದವರ ವಿವರಗಳನ್ನು ತಾಲೂಕುವಾರು ಸಿದ್ಧ್ದಪಡಿಸಿ ಸಮಿತಿಗೆ ನೀಡಬೇಕು. ತಾಲೂಕು ಪಂಚಾಯಿತಿ ಇಒ ಹಾಗೂ ಸಿಡಿಪಿಒಗಳ ಸಮಿತಿ ರಚಿಸಿ ಒಂದು ತಿಂಗಳ ಒಳಗೆ ಇ&-ಕೆವೈಸಿ ಹಾಗೂ ಎನ್ಪಿಸಿಐ ಮ್ಯಾಪಿಂಗ್ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಡಿಸಿ ಅಕ್ರಂಪಾಷಾ ಸೂಚಿಸಿದರು.
ಜಿಲ್ಲೆಯಲ್ಲಿ 3,20,659 ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಯಾಗಿದ್ದು, ಇದವರೆಗೂ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ 830.74 ಕೋಟಿ ರೂ. ಜಮೆ ಮಾಡಲಾಗಿದೆ. ಇ-ಕೆವೈಸಿ ಹಾಗೂ ಎನ್.ಪಿ.ಸಿ.ಐ ಮ್ಯಾಪಿಂಗ್ ವಿಫಲತೆ ಹಾಗೂ ಫಲಾನುಭವಿಗಳ ಬ್ಯಾಂಕ್ ಖಾತೆ ನಿಷ್ಕ್ರಿಯಗೊಂಡ ಕಾರಣ 3,397 ಖಾತೆಗಳಿಗೆ ಹಣ ಜಮೆಯಾಗಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಜಿ.ಪಂ ಉಪಕಾರ್ಯದರ್ಶಿ ಬಿ.ಶಿವಕುಮಾರ್ ಮಾತನಾಡಿ, ಯುವನಿಧಿ ಯೋಜನೆ ಜಾರಿಯಾದ ದಿನದಿಂದ 601ಫಲಾನುಭವಿಗಳ ಖಾತೆಗೆ ಒಟ್ಟು 14.20 ಕೋಟಿ ರೂ. ನಿರುದ್ಯೋಗಿ ಭತ್ಯೆ ಪಾವತಿಸಲಾಗಿದೆ ಎಂದು ತಿಳಿಸಿದರು.ಜಿಲ್ಲೆಯಲ್ಲಿ ಪದವಿ ಪೂರ್ಣಗೊಳಿಸಿದ 591 ಮಂದಿ ಹಾಗೂ ಡಿಪ್ಲೋಮಾ ಪೂರ್ಣಗೊಳಿಸಿದ 10 ಫಲಾನುಭವಿಗಳು ಸೇರಿ ಒಟ್ಟು 601 ಫಲಾನುಭವಿಗಳಿದ್ದಾರೆ. ಯುವನಿಧಿ ಯೋಜನೆಯ ಜಿಲ್ಲೆಯ ಫಲಾನುಭವಿಗಳು ಹೆಚ್ಚಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬೆಂಗಳೂರು ಜಿಲ್ಲೆಯಲ್ಲಿ ತರಬೇತಿ ಪಡೆಯುತ್ತಿದ್ದು, ಸಹಕಾರಿಯಾಗುತ್ತಿದೆ ಎಂದರು.
4.50 ಲಕ್ಷ ಗೃಹ ಜ್ಯೋತಿ ಲಾನುಭವಿಗಳು
ಗೃಹ ಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ ಪ್ರತಿ ಮಾಹೆ 14 ಕೋಟಿ ರೂ. ಹೊಂದಾಣಿಕೆ ಮೊತ್ತ ಪಾವತಿ ಮಾಡಲಾಗುತ್ತಿದೆ. ಇಲ್ಲಿಯವರೆಗೂ 113.68 ಕೋಟಿ ಯೋಜನೆಯಡಿ ವೆಚ್ಚ ಭರಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 4,50,265 ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಾಗಿದ್ದಾರೆ ಎಂದು ಬೆಸ್ಕಾಂ ಇಂಜಿನಿಯರ್ ಕವಿತಾ ಮಾಹಿತಿ ನೀಡಿದರು.
ಪ್ರತಿ ತಿಂಗಳು 86 ಲಕ್ಷ ವೆಚ್ಚ
ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ ಆಗಸ್ಟ್ ಮಾಹೆಯವರೆಗೆ 10,22,615 ಫಲಾನುಭವಿಗಳಿಗೆ ಹಣ ಪಾವತಿಯಾಗಿದೆ. ಪ್ರತಿ ಮಾಹೆ ಜಿಲ್ಲೆಯಲ್ಲಿ ಸರಾಸರಿ ರೂ.86 ಲಕ್ಷಕ್ಕೂ ಅಧಿಕ ಮೊತ್ತ ಪಾವತಿ ಮಾಡಲಾಗುತ್ತಿದ್ದು, ಅನ್ನಭಾಗ್ಯ ಯೋಜನೆಯಡಿ ಇದುವರೆಗೂ 245.42 ಕೋಟಿ ರೂ. ಹಣ ಪಾವತಿ ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕಿ ಲತಾ ಹೇಳಿದರು.
ನೋಡಲ್ ಅಧಿಕಾರಿಗಳ ನೇಮಕ
ಜಿಲ್ಲಾ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಕಚೇರಿಗಳನ್ನು ಸ್ಥಾಪಿಸಿ, ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು ಎಂದು ಜಿಲ್ಲಾಧಿಕಾರಿ ಅಕ್ರಂಪಾಷಾ ಹೇಳಿದರು. ಜಿಲ್ಲಾಮಟ್ಟದ ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಸ್ಥಿತಿಗತಿ ಕುರಿತು ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಸಕಾಲಕ್ಕೆ ಮಾಹಿತಿ ಒದಗಿಸಬೇಕು ಎಂದು ಸೂಚಿಸಿದರು.
4,268 ಮಂದಿ ಸೌಲಭ್ಯ ಪಡೆಯಲು ಅನರ್ಹ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ನಾರಾಯಣಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ 4,268 ಫಲಾನುಭವಿಗಳು ಜಿಎಸ್ಟಿ ಹಾಗೂ ಐಟಿ ಪಾವತಿ ಮಾಡುತ್ತಿರುವ ಕಾರಣ ಯೋಜನೆ ಲಾಭ ಪಡೆಯಲು ಅರ್ಹರಲ್ಲ ಎಂದು ಮಾಹಿತಿ ನೀಡಿದರು.