ದಸರಾ ಪ್ರಾಧಿಕಾರ ಘೋಷಣೆ ಮಾಡಲಿ

narayana gowda
Published on

ದಸರಾ ಪ್ರಾಧಿಕಾರ ರಚನೆಯಾದರೆ ಪ್ರವಾಸೋದ್ಯಮಕ್ಕೆ ಅನುಕೂಲವಾಗಲಿದ್ದು, ದಸರಾ ಪ್ರಾಧಿಕಾರವನ್ನು ಮುಖ್ಯಮಂತ್ರಿಗಳು ಘೋಷಣೆ ಮಾಡಲೇ ಬೇಕು ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ಒತ್ತಾಯಿಸಿದ್ದಾರೆ.

ಸದ್ಯಕ್ಕೆ ಅಗತ್ಯವಾಗಿರುವುದು ದಸರಾ ಪ್ರಾಧಿಕಾರ. ಆದರೆ, ಮುಖ್ಯಮಂತ್ರಿಗಳು ಶ್ರೀ ಚಾಮುಂಡೇಶ್ವರಿ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ಘೋಷಿಸಿದ್ದಾರೆ.

ಈಗಲಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದರಿ ಪ್ರಾಧಿಕಾರವನ್ನು ದಸರಾ ಪ್ರಾಧಿಕಾರವನ್ನಾಗಿ ಪರಿವರ್ತಿಸಬೇಕು. ದಸರಾ ಪ್ರಾಧಿಕಾರದ ಅಂಗವಾಗಿ ಶ್ರೀ ಚಾಮುಂಡೇಶ್ವರಿ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ಸೇರಿಸಬೇಕು. ಆ ಮೂಲಕ ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡಬೇಕು. ವರ್ಷಪೂರ್ತಿ ದಸರೆ ಚಟುವಟಿಕೆಗಳು ನಡೆಯುವಂತೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net