ಚುನಾವಣಾ ಆಯೋಗ ಕ್ರಮ ಕೈಗೊಳ್ಳಲಿ

HARISH ACHARYA
Published on

ಮಡಿಕೇರಿ: ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ಆಸ್ತಿಯನ್ನು ಘೋಷಿಸಿಕೊಳ್ಳಬೇಕು ಎನ್ನುವ ನಿಯಮ ಜಾರಿಯಲ್ಲಿದೆ. ಇದರ ಪಾಲನೆಯೊಂದಿಗೆ ೫ ವ?ರ್ಗಳ ಅವಧಿ ಪೂರ್ಣಗೊಳ್ಳುವ ಸಂದರ್ಭವೂ ಎಲ್ಲಾ ಜನಪ್ರತಿನಿಧಿಗಳು ತಮ್ಮ ಆಸ್ತಿಯನ್ನು ಸಾರ್ವಜನಿಕವಾಗಿ ಘೋಷಿಸಿಕೊಳ್ಳಲು ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕೆಂದು ಪೀಪಲ್ಸ್ ಮೂಮೆಂಟ್ ಫಾರ್ ಹ್ಯೂಮನ್ ರೈಟ್ಸ್‌ನ ಜಿಲ್ಲಾಧ್ಯಕ್ಷ ಹರೀಶ್ ಜಿ.ಆಚಾರ್ಯ ಒತ್ತಾಯಿಸಿದ್ದಾರೆ.


ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಾಯಾರ್ಂಗವನ್ನು ಹಿಡಿತದಲ್ಲಿಟ್ಟು ಪಾರದರ್ಶಕ ಆಡಳಿತ ನೀಡುವ ಜವಾಬ್ದಾರಿಯನ್ನು ಹೊತ್ತಿರುವ ಶಾಸಕಾಂಗ ಇಂದು ಹಾದಿ ತಪ್ಪುತ್ತಿದೆ. ರಾಜಕೀಯ ಕ್ಷೇತ್ರ ಕಲುಷಿತವಾಗುತ್ತಿದೆ, ಇದರಿಂದ ಜನ ಬೇಸತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಚುನಾವಣೆ ಗೆಲ್ಲುವುದಕ್ಕಾಗಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ೧೦ ರಿಂದ ೧೦೦ ಕೋಟಿ ರೂ.ಗಳವರೆಗೆ ಖರ್ಚು ಮಾಡಲು ಸಿದ್ಧರಿದ್ದಾರೆ. ನ್ಯಾಯಯುತವಾಗಿ ಬೆವರು ಸುರಿಸಿ ದುಡಿದ ಹಣವನ್ನು ಈ ರೀತಿ ಖರ್ಚು ಮಾಡಲು ಸಾಧ್ಯವೇ ಎನ್ನುವ ಪ್ರಶ್ನೆ ಮತದಾರರನ್ನು ಕಾಡುತ್ತಿದೆ. ಆದ್ದರಿಂದ ಭ್ರ?್ಟ ವ್ಯವಸ್ಥೆಗೆ ಕಡಿವಾಣ ಹಾಕಲು ಚುನಾವಣೆಗೆ ಸ್ಪರ್ಧಿಸುವಾಗ ನೀಡಿದ ಆಸ್ತಿಯ ಮೌಲ್ಯಕ್ಕೂ ೫ ವ?ರ್ಗಳ ನಂತರದ ಮೌಲ್ಯಕ್ಕೂ ಇರುವ ವ್ಯತ್ಯಾಸವನ್ನು ಜನರೆದುರು ತೆರೆದಿಡುವ ನಿಯಮವನ್ನು ಚುನಾವಣಾ ಆಯೋಗ ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.


ಚುನಾವಣೆಗೆ ಸ್ಪರ್ಧಿಸುವ ಸಂದರ್ಭ ಮತ್ತು ಅಧಿಕಾರವಧಿ ಪೂರ್ಣಗೊಂಡ ನಂತರ ಜನಪ್ರತಿನಿಧಿಗಳ ಆಸ್ತಿಯಲ್ಲಾದ ವ್ಯತ್ಯಾಸಗಳ ಬಗ್ಗೆ ತೆರಿಗೆ ಇಲಾಖೆ ನಿಗಾ ವಹಿಸಬೇಕು. ಎರಡು ಬಾರಿ ಆಸ್ತಿಯನ್ನು ಬಹಿರಂಗವಾಗಿ ಘೋಷಿಸಿಕೊಳ್ಳಲು ಚುನಾವಣಾ ಆಯೋಗ ನಿಯಮ ರೂಪಿಬೇಕೆಂದು ಒತ್ತಾಯಿಸಿದ ಅವರು, ಈ ಬಗ್ಗೆ ರಾಷ್ಟ್ರಪತಿಗಳು, ಪ್ರಧಾನಮಂತ್ರಿಗಳು ಮತ್ತು ಚುನಾವಣಾ ಆಯೋಗಕ್ಕೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net