ನಿಗದಿತ ಅವಧಿಯಲ್ಲಿ ಕಡತ ವಿಲೇವಾರಿ ಆಗಲಿ

Dnd Janaspandana
Published on

ದಾಂಡೇಲಿ: ಜನರ ಕೆಲಸ ಮಾಡಿಕೊಡಲು ಎಲ್ಲ ಇಲಾಖೆಯ ಅಧಿಕಾರಿಗಳು ಕಾಳಜಿ ವಹಿಸಬೇಕು. ಸರ್ಕಾರ ನಿಗದಿ ಪಡಿಸಿದ ಅವಧಿಯಲ್ಲಿ ಕಡತಗಳನ್ನು ಪ್ರಾಮಾಣಿಕವಾಗಿ ವಿಲೇವಾರಿ ಮಾಡಿ ಎಂದು ಶಾಸಕ ಆರ್.ವಿ ದೇಶಪಾಂಡೆ ಸೂಚಿಸಿದರು.

ನಗರದ ಕಾರ್ಮಿಕ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಗರಸಭೆಯಲ್ಲಿ ಕೆಲಸ ವಿಳಂಬ ಆಗುತ್ತಿದೆ ಎಂಬ ಸಾರ್ವಜನಿಕರ ದೂರಿಗೆ ಜನರ ಸಮಸ್ಯೆಗೆ ಸ್ಪಂದಿಸಬೇಕು ವಿನಾಕಾರಣ ಅಲೆದಾಡುವಂತೆ ಮಾಡಬಾರದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ತಹಸೀಲ್ದಾರ್ ಶೈಲೇಶ ಪರಮಾನಂದ 43 ಜನರ ಬೇಡಿಕೆಗಳ ಅಹವಾಲನ್ನು ಮಂಡಿಸಿದಾಗ ಶಾಸಕರು ಸಂಬಂಧಪಟ್ಟ ಅಧಿಕಾರಿಗಳನ್ನು ಕರೆಯಿಸಿ ಸಮಸ್ಯೆಗಳನ್ನು ಬಗೆಹರಿಸಲು ಸೂಚನೆ ನೀಡಿದರು.

ಪೌರಾಯುಕ್ತ ರಾಜಾರಾಂ ಪವಾರ, ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮೋಹನ ಹಲವಾಯಿ, ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net