ಮೀನುಗಾರರು ಸವಲತ್ತು ಸದ್ಬಳಕೆ ಮಾಡಿಕೊಳ್ಳಲಿ

26M.D.R.4
ಮದ್ದೂರು ಪಟ್ಟಣದ ಮೀನುಗಾರಿಕೆ ಇಲಾಖೆಯ ಆವರಣದಲ್ಲಿ ಮೀನುಗಾರರಿಗೆ ಸಲಕರಣೆ ಕಿಟ್‌ಗಳನ್ನು ಶಾಸಕ ಕೆ.ಎಂ.ಉದಯ್ ವಿತರಣೆ ಮಾಡಿದರು. ಕೆ.ಜೆ.ಪೂಜಾಶ್ರೀ, ಮೋಹನ್, ಸಿದ್ದಯ್ಯ, ಜಿ.ಶೇಖರ್, ಕೃಷ್ಣಪ್ಪ ಇದ್ದರು.
Published on

ಮದ್ದೂರು: ಮೀನುಗಾರರಿಗೆ ಸರ್ಕಾರ ಹಲವಾರು ಸವಲತ್ತುಗಳನ್ನು ನೀಡುತ್ತಿದ್ದು, ಇದನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ಪಟ್ಟಣದ ಮೀನುಗಾರಿಕೆ ಇಲಾಖೆಯ ಆವರಣದಲ್ಲಿ ಗುರುವಾರ 2022-23 ನೇ ಸಾಲಿನ ಮೀನುಗಾರಿಕೆ ಸಲಕರಣೆ ಕಿಟ್‌ಗಳನ್ನು 15 ಜನರಿಗೆ ವಿತರಿಸಿ ಮಾತನಾಡಿದರು.

ಮೀನುಗಾರಿಕೆ ಇಲಾಖೆಯಿಂದ ಬಲೆಗಳು, ದ್ವಿಚಕ್ರ ವಾಹನ ಖರೀದಿಗೆ ಸಹಾಯ ಧನ, ವಸತಿ ರಹಿತರಿಗೆ ಮನೆ ಕಟ್ಟಿಕೊಳ್ಳಲು ವಿಶೇಷ ಅನುದಾನ, ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಮೂಲಕ ಖಾಸಗಿ ಕೊಳ ನಿರ್ಮಾಣ ಸೇರಿದಂತೆ ಹಲವಾರು ಯೋಜನೆಗಳಿದ್ದು, ಈ ಯೋಜನೆಗಳನ್ನು ಸುದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಮುಂದಿನ ದಿನಗಳಲ್ಲಿ ತಾಲೂಕಿನ ಮೀನುಗಾರರಿಗೆ ರಾಜ್ಯ ಸರ್ಕಾರದಿಂದ ವಿಶೇಷ ಅನುದಾನ ತಂದು ಅನುಕೂಲ ಕಲ್ಪಿಸಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದರು.

ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಜೆ.ಪೂಜಾಶ್ರೀ, ಸಹಾಯಕ ಮೋಹನ್, ಗಂಗಾ ಪರಮೇಶ್ವರಿ ಮೀನುಗಾರರ ಸಂಘದ ಸಿದ್ದಯ್ಯ, ಜಿ.ಶೇಖರ್, ಕೃಷ್ಣಪ್ಪ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net