ಅರ್ಹರಿಗೆ ಪಂಚ ಗ್ಯಾರಂಟಿ ತಲುಪಲಿ

ಸರಗೂರಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚಲುವರಾಜು, ಪ್ರೇಮಕುಮಾರ್, ಸದಶಿವಯ್ಯ ಇತರರು ಪಾಲ್ಗೊಂಡಿದ್ದರು.
ಸರಗೂರಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚಲುವರಾಜು, ಪ್ರೇಮಕುಮಾರ್, ಸದಶಿವಯ್ಯ ಇತರರು ಪಾಲ್ಗೊಂಡಿದ್ದರು.
Published on

ಸರಗೂರು: ಪಂಚ ಗ್ಯಾರಂಟಿ ಯೋಜನೆಗಳು ಬಡವರ ಬದುಕಿಗೆ ಭರವಸೆ ನೀಡುವುದರೊಂದಿಗೆ ಸ್ವಾವಲಂಬಿ ಜೀವನ ನಿರ್ವಹಿಸಲು ಸಹಕಾರಿಯಾಗಿದ್ದು, ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸಿ ಎಂದು ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಅಧ್ಯಕ್ಷ ಚನ್ನೀಪುರ ಚೆಲುವರಾಜು ಹೇಳಿದರು.

ಪಟ್ಟಣದ ತಾಲೂಕು ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಸಹಾಯಕ ಮತ್ತು ಬಡ ಕುಟುಂಬಗಳಿಗೆ ವರದಾನವಾಗಿರುವ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಗಳಿಸಿದೆ ಎಂದರು.

2024ರ ಡಿಸೆಂಬರ್ ಅಂತ್ಯದವರೆಗೆ ಗೃಹಲಕ್ಷ್ಮಿ ಯೋಜನೆಯಡಿ 24301 ಫಲಾನುಭವಿಗಳು ತಾಲೂಕಿನಲ್ಲಿ ನೋಂದಾಯಿಸಿಕೊಂಡಿದ್ದಾರೆ. ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ 31,366 ಫಲಾನುಭವಿಗಳಿದ್ದು, ಒಟ್ಟು 27,956 ಕೋಟಿ ರೂ. ಭರಿಸಲಾಗಿದೆ. ತಾಲೂಕಿನಲ್ಲಿ 24,120 ಪಡಿತರ ಕಾರ್ಡ್‌ಗಳಿದ್ದು, 1.21 ಕೋಟಿ ರೂ. ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗಿದೆ. ವಿವಿಧ ತಾಂತ್ರಿಕ ಸಮಸ್ಯೆಗಳಿಂದ ಬಾಕಿ ಇರುವ ಫಲಾನುಭವಿಗಳಿಗೆ ಹಣ ವರ್ಗಾಯಿಸಲು ಅಗತ್ಯ ಕ್ರಮ ವಹಿಸಿ ಎಂದು ಹೇಳಿದರು.

ತಾಲೂಕು ಪಂಚಾಯಿತಿ ಇಒ ಪ್ರೇಮ್ ಕುಮಾರ್ ಮಾತನಾಡಿದರು. ಎಒ ಸದಾಶಿವಯ್ಯ, ಸ್‌ಸ್ಕ್ ಎಇಇ ಆಶೋಕ್, ಯೋಜನಾಧಿಕಾರಿ ಮಹದೇವಸ್ವಾಮಿ, ಸಮಿತಿ ಸದಸ್ಯರಾದ ರವಿ ಬಸಾಪುರ, ದೇವರಾಜು, ಮಹಮದ್ ಸುಹೇಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net