ಬಡವ, ಶ್ರೀಮಂತರ ನಡುವಿನ ಅಂತರ ಕಡಿಮೆಯಾಗಲಿ

01ಬಿಟಿಪಿ01
ಬೆಟ್ಟದಪುರ ಸಮೀಪದ ಗಂಗನಕುಪ್ಪೆ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ಮಾಡಲಾಯಿತು. ಶೇಖರ್, ತ್ಯಾಗರಾಜ್, ಕಾಂತರಾಜ್, ಅಶೋಕ್, ಸಂತೋಷ್, ಪವನ್ ಕುಮಾರ್, ಮಂಜು, ರಾಜೇಶ್ ಇದ್ದರು.
Published on

ಬೆಟ್ಟದಪುರ: ಸಮೀಪದ ಗಂಗನಕುಪ್ಪೆ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದ ವತಿಯಿಂದ ಇತ್ತೀಚೆಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಹಾರನಹಳ್ಳಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಶೇಖರ್ ಮಾತನಾಡಿ, ವಿವಿಧ ಸಂಸ್ಕೃತಿ, ಧರ್ಮದ ಜನರು ನೆಲೆಸಿರುವ ದೇಶಕ್ಕೆ ಸಮರ್ಥವಾದ ಸಂವಿಧಾನವನ್ನು ಅಂಬೇಡ್ಕರ್ ನೀಡಿದ್ದಾರೆ. ಅವರು ದೇಶದ ಆಸ್ತಿ. ಅವರ ಬದುಕು, ತತ್ವ, ಚಿಂತನೆಗಳು ಪ್ರತಿಯೊಬ್ಬರಿಗೂ ಮಾದರಿಯಾಗಿದೆ. ಕೇವಲ ಅವರನ್ನು ನೆನೆದು ನಂತರ ಮರೆಯುವ ಬದಲು ಸಂವಿಧಾನದ ತತ್ವಗಳನ್ನು ಪಾಲಿಸಲು ಎಲ್ಲರೂ ಮುಂದಾಗಬೇಕು. ಬಡವ, ಶ್ರೀಮಂತರ ನಡುವಿನ ಅಂತರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಎಲ್ಲರೂ ಚಿಂತಿಸಬೇಕು. ಆಗ ಮಾತ್ರ ಅಂಬೇಡ್ಕರ್ ಅವರಂಥ ಮಹನೀಯರ ಜನ್ಮ ದಿನಾಚರಣೆಗಳಿಗೆ ಅರ್ಥ ಬರುತ್ತದೆ ಎಂದು ಅಭಿಪ್ರಾಯಪಟ್ಟರು.

ಜಯಂತಿ ಪ್ರಯುಕ್ತ ವಿವಿಧ ಪುಷ್ಪಗಳಿಂದ ಅಲಂಕಾರಗೊಂಡ ಬೆಳ್ಳಿ ರಥದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ಇಟ್ಟು, ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂವಿಧಾನ ಹಾಗೂ ಅಂಬೇಡ್ಕರ್ ಅವರ ಸಾಧನೆಯ ಗೀತೆಗಳೊಂದಿಗೆ ಮೆರವಣಿಗೆ ಮಾಡಲಾಯಿತು. ಸಂಘದ ಪದಾಧಿಕಾರಿಗಳು, ಗ್ರಾಮಸ್ಥರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ನಮನ ಸಲ್ಲಿಸಿದರು.

ಹಾರನಹಳ್ಳಿ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಶೇಖರ್, ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದ ಅಧ್ಯಕ್ಷ ತ್ಯಾಗರಾಜ್, ಉಪಾಧ್ಯಕ್ಷ ಕಾಂತರಾಜ್, ಕಾರ್ಯದರ್ಶಿ ಅಶೋಕ್, ಖಜಾಂಚಿ ಸಂತೋಷ್, ಸಂಚಾಲಕರಾದ ಆರ್.ಸಂತೋಷ್, ಮಂಜು, ಪವನ್ ಕುಮಾರ್, ರಾಜೇಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net