ಸರ್ಕಾರ ಗಲಾಟೆ, ಗಲಭೆ ನಿಯಂತ್ರಿಸಲಿ

6 vikram 2
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಮನೆ ಮನೆಗೆ ಕಲ್ಲು ಒಗೆಯುವುದು, ಕತ್ತಿ ತುಗೊಂಡು ಹೊಡೆಯೋದು ಸಣ್ಣ ವಿಚಾರವೇ? ಎಂದು ಶಿವಮೊಗ್ಗ ರಾಗಿಗುಡ್ಡದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಪ್ರಶ್ನಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತಂಹ ಗಲಾಟೆ, ಗಲಭೆಗಳನ್ನು ಸರ್ಕಾರ ನಿಯಂತ್ರಿಸಬೇಕು. ಗಲಭೆಗಳನ್ನು ಮೂಲದಲ್ಲೇ ಹತ್ತಿಕ್ಕಬೇಕು. ಇವುಗಳನ್ನು ಸಣ್ಣ ವಿಷಯ ಎಂದು ತಿಳಿಯಬಾರದು. ಸರ್ಕಾರ ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದರು.
ನಮ್ಮ ಸಂತೋಷದ ಪ್ರಯತ್ನ ಮತ್ತೊಬ್ಬರ ದುಃಖವಾಗಬಾರದು. ಎಲ್ಲರೂ ಸಂತೋಷದಿಂದ ಇರಬೇಕು. ಧರ್ಮ ಎಂದರೆ ಸಮಾಜವನ್ನು ನಿರಂತರ ಮುನ್ನಡೆಸುವ ಬದುಕಿನ ಸೂತ್ರ. ಎಲ್ಲರೂ ಸುಖ, ಸಂತೋಷದಿಂದ ಇರಬೇಕು. ಅದಕ್ಕಾಗಿ ಅಳವಡಿಸಿಕೊಳ್ಳವೇಕಾದ ನೀತಿ ನಿಯಮವೇ ಸನಾತನ ಧರ್ಮ. ಎಲ್ಲರಿಗೂ ಸುಖ ಸಿಗುವಂತೆ ನಾವು ಪ್ರಯತ್ನಿಸಬೇಕು. ಸನಾತನ ಧರ್ಮ ವಿರೋಧಿಸುವ ಮಟ್ಟಕ್ಕೆ ಕೈ ಹಾಕುವುದು ಸರಿಯಲ್ಲ. ಒಮ್ಮೆ ಕಿಡಿ ಹೊತ್ತಿದರೆ ಶಾಂತಿ ಬೇಗ ಸಿಗುವುದಿಲ್ಲ. ಇದಕ್ಕೆ ಮಣಿಪುರ ರಾಜ್ಯ ಉದಾಹರಣೆ ಎಂದು ಎಚ್ಚರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net