ಕಾವೇರಿ ನದಿ ರಕ್ಷಣೆಗೆ ಸರ್ಕಾರ ವಿಶೇಷ ಕಾಯ್ದೆ ರೂಪಿಸಲಿ

13ark3..
ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ಆಯೋಜಿಸಿದ್ದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದಲ್ಲಿ ಶ್ರೀಕಂಠಾರಾಧ್ಯ, ಜಿನ್ನಪ್ಪ, ಕುಮಾರಸ್ವಾಮಿ ಇತರರು ಇದ್ದರು.
Published on

ಅರಕಲಗೂಡು: ಕಾವೇರಿ ನದಿ ರಕ್ಷಣೆಗೆ ಸರ್ಕಾರ ವಿಶೇಷ ಕಾಯ್ದೆ ರೂಪಿಸಬೇಕು ಎಂದು ಹರಳಹಳ್ಳಿ ಗುರುಮಠದ ಶ್ರೀಕಂಠಾರಾಧ್ಯ ಆಗ್ರಹಿಸಿದರು.

ತಾಲೂಕಿನ ರಾಮನಾಥಪುರದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಗ್ರಾಮ ಪಂಚಾಯಿತಿ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಸಹಯೋಗದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಾತನಾಡಿ, ಹಲವಾರು ಸಲ ಸಾಧು, ಸಂತರು ಹಾಗೂ ಕಾವೇರಿ ನದಿ ಸಮಿತಿ ಪದಾಧಿಕಾರಿಗಳು ನದಿ ರಕ್ಷಣೆಗಾಗಿ ಆಗ್ರಹಿಸಿ ಹಾಗೂ ಸಂಬಂಧಪಟ್ಟ ಅಧಿಕಾರಿ ಹಾಗೂ ಜನಪ್ರತಿನಿಧಿಗಳನ್ನು ಒತ್ತಾಯಿಸುತ್ತ ಬಂದಿದ್ದಾರೆ. ಕಾಯ್ದೆ ಜಾರಿಗೆ ತಂದು ಕಾವೇರಿ ನದಿ ಮಲಿನವಾಗದ ರೀತಿ ಸ್ವಚ್ಛತೆ ಕಾಪಾಡುವಂತೆ ಒತ್ತಾಯಿಸಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಜಿನ್ನಪ್ಪ, ಸಮಿತಿಯ ಕುಮಾರಸ್ವಾಮಿ, ಸಿದ್ದಯ್ಯ, ಮಂಜು, ವಿಜಯ್‌ಕುಮಾರ್, ಗ್ರಾಪಂ ಪಿಡಿಒ ಕುಮಾರಸ್ವಾಮಿ, ಕಾರ್ಯದರ್ಶಿ ರೇವಣ್ಣ ಇತರರು ಇದ್ದರು. ಕಾವೇರಿ ನದಿಯಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net