ಸರ್ಕಾರ ಕಬ್ಬು ಬೆಳೆಗಾರರ ಸಮಸ್ಯೆ ಆಲಿಸಲಿ

24-pnp 2
ಬೆಂಗಳೂರಿನ ವಿಕಾಶಸೌಧದಲ್ಲಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಕಬ್ಬು ನಿಯಂತ್ರಣ ಮಂಡಳಿ ಸಭೆಯಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭಾಗವಹಿಸಿದ್ದರು.
Published on

ಪಾಂಡವಪುರ: ರಾಜ್ಯಾದ್ಯಂತ ಕಬ್ಬು ಬೆಳೆಗಾರರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರ್ಕಾರ ಗಮನಹರಿಸಿ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಒತ್ತಾಯಿಸಿದರು.
ಬೆಂಗಳೂರಿನ ವಿಕಾಸಸೌಧದಲ್ಲಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರ ಅಧ್ಯಕ್ಷತೆಯಲ್ಲಿ ಗುರುವಾರ ಆಯೋಜಿಸಿದ್ದ ಕಬ್ಬು ನಿಯಂತ್ರಣ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸರ್ಕಾರ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಆಲಿಸುವ ಕೆಲಸ ಮಾಡಬೇಕು. ಜತೆಗೆ ಬರ ಹಿನ್ನೆಲೆಯಲ್ಲಿ ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸುವಂತೆ ಅವರು ಸಚಿವರಲ್ಲಿ ಮನವಿ ಮಾಡಿದರು. ಈ ವೇಳೆ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಕಬ್ಬು ನಿಯಂತ್ರಣ ಮಂಡಳಿ ಸದಸ್ಯರು ಮತ್ತು ಅಧಿಕಾರಿಗಳು ಇದ್ದರು.

ಬೆಂಗಳೂರಿನ ವಿಕಾಶಸೌಧದಲ್ಲಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಕಬ್ಬು ನಿಯಂತ್ರಣ ಮಂಡಳಿ ಸಭೆಯಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net