ಸರ್ಕಾರ ಕಠಿಣ ಕಾನೂನು ರೂಪಿಸಲಿ

IMG_20240817_164050
Published on


ಅರಸೀಕೆರೆ : ತರಬೇತಿ ನಿರತ ವೈದ್ಯರ ರಕ್ಷಣೆಗೆ ಸರ್ಕಾರ ಕಠಿಣ ಕಾನೂನು ರೂಪಿಸಬೇಕು ಎಂದು ವೈದ್ಯ ಡಾ.ಶಿವಕುಮಾರ್ ಒತ್ತಾಯಿಸಿದರು.ನಗರದ ಐಎಂಎ ಕಚೇರಿಯಲ್ಲಿ ಶನಿವಾರ ಕರೆಯಲಾಗಿದ್ದ ಖಂಡನಾ ನಿರ್ಣಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಕೊಲ್ಕತ್ತಾದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದಿರುವ ದುರುಳರಿಗೆ ತಕ್ಕ ಶಿಕ್ಷೆ ನೀಡಬೇಕು. ಸರ್ಕಾರಿ, ಖಾಸಗಿ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಪುರುಷ ಹಾಗೂ ಮಹಿಳಾ ವೈದ್ಯರು ಕರ್ತವ್ಯ ನಿರ್ವಹಿಸಲು ಭಯಭೀತರಾಗಿದ್ದಾರೆ. ಹಲ್ಲೆ, ಕೊಲೆ ಪ್ರಕರಣ ಮರುಕಳಿಸದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಠಿಣ ಕಾನೂನು ರೂಪಿಸಬೇಕು ಎಂದು ಆಗ್ರಹಿಸಿದರು.


ತಾಲೂಕು ವೈದ್ಯರ ಸಂಘದ ಅಧ್ಯಕ್ಷ ಡಾ.ಶಿಬಿರ ಹೆಗಡೆ ಮಾತನಾಡಿ, ತರಬೇತಿ ನಿರತ ವೈದ್ಯ ವಿದ್ಯಾರ್ಥಿಗಳು ಆಸ್ಪತ್ರೆಗಳಲ್ಲಿ ಅಗತ್ಯ ಮೂಲ ಸೌಕರ್ಯವಿಲ್ಲದೇ ಪರದಾಡುವಂತಾಗಿದೆ. ಇದರ ನಡುವೆ ಹಲ್ಲೆಯಂತಹ ಪ್ರಕರಣ ಪದೇ ಪದೆ ನಡೆಯುತ್ತಿರುವುದು ದುರದೃಷ್ಟಕರ. ಜನರ ಸೇವೆ ಮಾಡುವ ನಮಗೆ ರಕ್ಷಣೆ ನೀಡದಿದ್ದರೆ ಹೇಗೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಡಾ.ನಾಗಭೂಷಣ್, ಡಾ.ಸುರೇಶ್, ಡಾ.ದೀಪಾ, ಮಕ್ಕಳ ತಜ್ಞ ಡಾ.ರವಿವರ್ಮ, ಡಾ.ರವೀಂದ್ರನಾಥ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net