ಸಾರಿಗೆ ನೌಕರರ ಬೇಡಿಕೆಗೆ ಸರ್ಕಾರ ಸ್ಪಂದಿಸಲಿ

21 CRP 01
Published on

ಚನ್ನರಾಯಪಟ್ಟಣ: ರಾಜ್ಯ ಸಾರಿಗೆ ನೌಕರರ ಅಹವಾಲುಗಳನ್ನು ಆಲಿಸಿ ಅವರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಮಾಜಿ ಶಾಸಕ ಸಿ.ಎಸ್.ಪುಟ್ಟೇಗೌಡ ಸರ್ಕಾರವನ್ನು ಒತ್ತಾಯಿಸಿದರು.

ಸಾರಿಗೆ ನೌಕರರು ತಮ್ಮನ್ನು ಸರ್ಕಾರಿ ನೌಕರನೆಂದು ಪರಿಗಣಿಸುವಂತೆ ಒತ್ತಾಯಿಸಿ ನಡೆಸುತ್ತಿರುವ ಮುಷ್ಕರಕ್ಕೆ ಸರ್ಕಾರ ಪೂರಕವಾಗಿ ಸ್ಪಂದಿಸಬೇಕು. ಅವರ ಬೇಡಿಕೆಗಳನ್ನು ಪೂರೈಸುವುದು ಕಷ್ಟ ಎಂಬ ಸಾರಿಗೆ ಸಚಿವರ ಹೇಳಿಕೆ ಸರಿಯಲ್ಲ ಎಂದು ಗುರುವಾರ ಸುದ್ದಿಗೋಷ್ಠಿ ಯಲ್ಲಿ ಹೇಳಿದರು.

ಸರ್ಕಾರದ ಕೆಲ ಪ್ರಮುಖ ನಾಯಕರು ಖಜಾನೆಯಲ್ಲಿ ಹಣವಿಲ್ಲ ಎಂದು ಹೇಳಿರುವುದು ಸರಿಯಲ್ಲ. ನಿತ್ಯ ಲಕ್ಷಾಂತರ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೊಂಡೊಯ್ಯುವ ಸಾರಿಗೆ ನೌಕರರ ಕಷ್ಟಕ್ಕೆ ಸರ್ಕಾರ ನಿಲ್ಲದಿದ್ದರೆ ಮತ್ಯಾರ ಸಮಸ್ಯೆಗೆ ಸ್ವಂದಿಸುತ್ತದೆ ಎಂದು ಪ್ರಶ್ನಿಸಿದರು.

ಚುನಾವಣೆ ವೇಳೆ ಮತ ಬೇಟೆಗಾಗಿ ಜನತೆ ಬಯಸದ ಸವಲತ್ತುಗಳನ್ನು ಸರ್ಕಾರ ಘೋಷಿಸುತ್ತದೆ. ಅದರ ಬದಲಾಗಿ ಸಾರಿಗೆ ನೌಕರರು, ಶ್ರಮಿಕರು, ರೈತರು, ಯೋಧರು ಹಾಗೂ ಪೊಲೀಸ್ ಕುಟುಂಬಗಳ ಕಷ್ಟಗಳಿಗೆ ಸ್ಪಂದಿಸಲಿ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net