ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

21-KGLPHOTO-2,,,
ಪ್ರಭು
Published on

ಕೊಳ್ಳೇಗಾಲ: ಉದ್ಯಮಿ ದಿ.ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ದಾಲಿ ನಡೆಸಿರುವವರಿಗೆ ಶಿಕ್ಷೆಯಾಗಬೇಕೆಂದು ಜಯ ಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ಪ್ರಭು ಒತ್ತಾಯಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾಗಿದ್ದ ದಿ.ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಅವರ ಮೇಲೆ ದುಷ್ಕರ್ಮಿಗಳು ಗುಂಡಿ ದಾಳಿ ನಡೆಸಿದ್ದಾರೆ. ಪೊಲೀಸ್ ಇಲಾಖೆ ಸೂಕ್ತ ತನಿಖೆ ಮಾಡಿ ತಪ್ಪಿತಸ್ಥರಿಗೆ ಕಾನೂನಿನಡಿ ಕಠಿಣ ಶಿಕ್ಷಿಗೆ ಗುರಿಪಡಸಬೇಕೆಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net