ಹಿಂದೆ ಗುರು, ಮುಂದೆ ಗುರಿ ಇರಲಿ

Let the Guru be behind, the goal ahead
ಇಳಕಲ್ಲದ ವಿಜಯ ಮಹಾಂತೇಶ ಕಲೆ ಹಾಗೂ ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಿಎಸ್‌ಐ ಶಾಂತಾ ಹಳ್ಳಿ ಮಾತನಾಡಿದರು. ಪ್ರಾಚಾರ್ಯ ಬಸವರಾಜ ಸುಗ್ಗಮದ, ಆರ್.ಎಂ.ಪಾಟೀಲ ಇದ್ದರು.
Published on

ಇಳಕಲ್ಲ(ಗ್ರಾ): ವಿದ್ಯಾರ್ಥಿನಿಯರು ತಮ್ಮ ಜೀವನದಲ್ಲಿ ಗುರಿ ಇಟ್ಟುಕೊಳ್ಳಬೇಕು. ಗುರಿ ಮುಟ್ಟಲು ಗುರುಗಳು ಮಾರ್ಗದರ್ಶನ ಮಾಡುತ್ತಾರೆ ಎಂದು ಇಳಕಲ್ಲ ನಗರ ಠಾಣೆ ಅಪರಾಧ ವಿಭಾಗದ ಪಿಎಸ್‌ಐ ಶಾಂತಾ ಹಳ್ಳಿ ಹೇಳಿದರು.

ನಗರದ ವಿಜಯ ಮಹಾಂತೇಶ ಕಲೆ ಹಾಗೂ ವಾಣಿಜ್ಯ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಸೋಮವಾರ ನಡೆದ ಬಿಎ, ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಮೊಬೈಲ್ ಬಳಕೆ ಮಾಡಬಾರದು. ಅದರಿಂದ ಏಕಾಗ್ರತೆ ಹಾಳಾಗುತ್ತದೆ. ಗುರಿ ಸಾಧನೆಗೆ ಯಾವುದೇ ಅಡ್ಡಿ-ಆತಂಕಗಳು ಇರಬಾರದು. ಅದಕ್ಕಾಗಿ ಎಲ್ಲ ವಿದ್ಯಾರ್ಥಿನಿಯರು ತಂದೆ-ತಾಯಿ ಗೌರವಕ್ಕೆ ಪಾತ್ರರಾಗಬೇಕು ಎಂದು ಹೇಳಿದರು.

ಪ್ರಾಚಾರ್ಯ ಬಸವರಾಜ ಸುಗ್ಗಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿನಿಯರು ಭವಿಷ್ಯದಲ್ಲಿ ಉನ್ನತ ಅಧಿಕಾರಿಗಳಾಗಿ ಕಾಲೇಜು ಮತ್ತು ತಂದೆ-ತಾಯಿ ಹೆಸರಿಗೆ ಕೀರ್ತಿ ತರಬೇಕು ಎಂದು ಹೇಳಿದರು.

ಆಡಳಿತಾಧಿಕಾರಿ ಆರ್.ಎಂ.ಪಾಟೀಲ ಉಪಸ್ಥಿತರಿದ್ದರು. ಎಸ್.ಆರ್.ಕಲ್ಯಾಣಶೆಟ್ಟಿ ಸ್ವಾಗತಿಸಿ, ಪರಿಚಯಿಸಿದರು. ಪ್ರೊ.ಟಿ.ಎಂ.ಕುಲಕರ್ಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅನುರಾಧಾ, ಚೈತ್ರಾ ನಿರೂಪಿಸಿದರು. ಸಹನಾ ಬಸೂದೆ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net