ಯುವ ಪೀಳಿಗೆಯಲ್ಲಿ ಓದುವ ಹವ್ಯಾಸ ಹೆಚ್ಚಾಗಲಿ

gan (10)
Published on

ಕುಂದಾಪುರ: ಯುವಪೀಳಿಗೆಯಲ್ಲಿ ಓದುವ ಹವ್ಯಾಸ ಹೆಚ್ಚಾಗಲಿ. ಪುಸ್ತಕಗಳ ಸಂಖ್ಯೆ ಹೆಚ್ಚಾಗುತ್ತಿದೆ, ಓದುವವರ ಸಂಖ್ಯೆಯೂ ಹೆಚ್ಚಲಿ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ್ ಜೋಷಿ ಹೇಳಿದರು.

ಕುಂಭಾಶಿ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ಸಾಹಿತಿ ಕೆ.ಪುಂಡಲೀಕ ನಾಯಕ್ ಅವರ ಆತ್ಮಕಥನ ಭಾವಸ್ಮತಿ ಪುಸ್ತಕವನ್ನು ಗುರುವಾರ ಬಿಡುಗಡೆಗೊಳಿಸಿ ಮಾತನಾಡಿದರು.

ಆನೆಗುಡ್ಡೆ ದೇವಸ್ಥಾನದ ಧರ್ಮದರ್ಶಿ ಶ್ರೀರಮಣ ಉಪಾಧ್ಯ, ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಡಾ.ಬಿ.ಎಂ.ಪಟೇಲ್, ಪಾಂಡು, ಉದ್ಯಮಿ ಸುಮುಖ ಸರ್ಜಿಕಲ್ಸ್‌ನ ಪಡಿಯಾರ್, ನಾರಾಯಣ ನಾಯಕ್ ನೇರಳಕಟ್ಟೆ, ಕುಂದಪ್ರಭ ಸಂಪಾದಕ ಯು.ಎಸ್.ಶೆಣೈ, ಕ್ಯಾಂಪ್ಕೋ ನಿರ್ದೇಶಕ ಜಯಪ್ರಕಾಶ್, ಮಂಗಳೂರು ವಿವಿ ಪ್ರಾಧ್ಯಾಪಕ ಡಾ.ಮಾಧವ ಎಂ.ಕೆ., ಮಂಜುನಾಥ, ಪತ್ರಕರ್ತರಾದ ಲಕ್ಷ್ಮೀ ಮಚ್ಚಿನ ಮೊದಲಾದವರು ಇದ್ದರು.

ಸಾಹಿತಿ ಕೆ.ಪುಂಡಲೀಕ ನಾಯಕ್ ಸ್ವಾಗತಿಸಿದರು. ಬೈಂದೂರು ಸಾಹಿತ್ಯ ಪರಿಷತ್‌ನ ಜಗದೀಶ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net