

ದೊಡ್ಡಬಳ್ಳಾಪುರ : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಮಹಿಳೆಯರು, ಯುವತಿಯರ ಮೇಲಿನ ಅತ್ಯಾಚಾರ, ಕೊಲೆ ಮತ್ತು ನಿಗೂಢ ಕಣ್ಮರೆಗಳ ಪ್ರಕರಣವನ್ನು ಹೈಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ನಗರದ ತಾಲೂಕು ಕಚೇರಿ ವೃತ್ತದಲ್ಲಿ ಸೋಮವಾರ ಸಂವಿಧಾನ ರಕ್ಷಣೆಗಾಗಿ ನಾಗರಿಕರ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು.
ಮಾಜಿ ಸಚಿವ ಉಗ್ರಪ್ಪ ಅವರ ಸಮಿತಿ ನೀಡಿದ ಶಿಫಾರಸುಗಳನ್ನು ಯಾವುದೇ ರಾಜಕೀಯ ಪಕ್ಷಗಳು ಗಣನೆಗೆ ತೆಗೆದುಕೊಂಡಿಲ್ಲ ಎಂದು ಸಂವಿಧಾನ ರಕ್ಷಣೆಗಾಗಿ ನಾಗರಿಕರ ವೇದಿಕೆಯ ಸಂಚಾಲಕ ಆರ್.ಚಂದ್ರತೇಜಸ್ವಿ ಆರೋಪಿಸಿದರು. ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು 2016ರಲ್ಲಿ ಸರ್ಕಾರ ವಿ.ಎಸ್.ಉಗ್ರಪ್ಪ ಅವರ ನೇತೃತ್ವದಲ್ಲಿ ಒಂದು ಸಮಿತಿಯನ್ನು ರಚನೆ ಮಾಡಿತ್ತು. 2018ರಲ್ಲಿ ಸಮಿತಿಯು 300ಕ್ಕೂ ಹೆಚ್ಚು ಶಿಫಾರಸು ಮಾಡಿತ್ತು. ಆದರೆ, ಸರ್ಕಾರಗಳು ಅದನ್ನು ಮೂಲೆಗೆ ಎಸೆದಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಉಗ್ರಪ್ಪ ಸಮಿತಿಯಲ್ಲಿ ಸದಸ್ಯರಾಗಿದ್ದ ಪ್ರಭಾಬೆಳವಂಗಲ ಮಾತನಾಡಿ, ಸೌಜನ್ಯ ಪ್ರಕರಣದಲ್ಲಿ ಅಮಾಯಕನೊಬ್ಬನನ್ನು ಆರೋಪಿ ಎಂದು ಜೈಲಿಗೆ ಹಾಕಿದ್ದು ಹಾಗೂ ಸಾ ನಾಶಮಾಡಿದ್ದರ ವಿರುದ್ಧ ವ್ಯಾಪಕವಾಗಿ ಪ್ರತಿಭಟನೆಗಳು ನಡೆದಿವೆ. ನಂತರ ಪ್ರಕರಣವನ್ನು ಸಿಬಿಐಗೆ ವಹಿಸಿ, ತನಿಖೆ ನಡೆದು ಸಿಬಿಐ ನ್ಯಾಯಾಲಯದ ತೀರ್ಪು ಸಹ ಹೊರ ಬಂದಿದೆ. ಇಡೀ ರಾಜ್ಯ ಅಮಾಯಕನೆಂದು ಗಟ್ಟಿ ಧ್ವನಿಯಲ್ಲಿ ಹೇಳಿದ ವ್ಯಕ್ತಿ ನಿರಪರಾಧಿ ಎಂದು ಬಿಡುಗಡೆ ಮಾಡಲಾಗಿದೆ. ಅದೇ ವೇಳೆಗೆ ಪ್ರಾಥಮಿಕ ಹಂತದಲ್ಲಿ ತನಿಖಾಧಿಕಾರಿಗಳು, ಶವಪರೀೆ ಮಾಡಿದ ವೈದ್ಯಾಧಿಕಾರಿಗಳು ಉದ್ದೇಶಪೂರ್ವಕವಾಗಿ ಸಾ ನಾಶ ಮಾಡಿದ್ದು, ಅವರ ಮೇಲೆ ಕ್ರಮ ಕೈಗಳ್ಳಬೇಕೆಂದೂ ನ್ಯಾಯಾಲಯ ಸೂಚನೆ ನೀಡಿತ್ತು. ಆದರೆ ಸರ್ಕಾರ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿಲ್ಲದಿರುವುದು ಅನುಮಾನಗಳಿಗೆ ಕಾರಣವಾಗಿದೆ ಎಂದರು.