ಕೆರೆ ಹಾನಿಯಾಗದಂತೆ ನೋಡಿಕೊಳ್ಳಲಿ

web2
ತೆಲಸಂಗ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹೂಳೆತ್ತಿ ಅಭಿವೃದ್ಧಿಪಡಿಸಿದ ಗುಳ್ಳವ್ವನ ಕೆರೆಯನ್ನು ಗ್ರಾಪಂಗೆ ಭಾನುವಾರ ಹಸ್ತಾಂತರಿಸಲಾಯಿತು. ನಾಗರತ್ನಾ ಹೆಗಡೆ, ರಜಬ ಅಲಿ, ಮಹಾಂತೇಶ ಪಿ.ಎಂ. ಇತರರಿದ್ದರು.
Published on

ತೆಲಸಂಗ: ಜೀವ ಜಲ ಕಾಪಾಡಿಕೊಳ್ಳುವ ಮೂಲಕ ಮುಂದಿನ ಪೀಳಿಗೆಗೆ ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ನಾಗರತ್ನಾ ಹೆಗಡೆ ಹೇಳಿದರು.

ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹೂಳೆತ್ತಿ ಅಭಿವೃದ್ಧಿಪಡಿಸಿದ ಗ್ರಾಮದ ಗುಳ್ಳವ್ವನ ಕೆರೆಯನ್ನು ಗ್ರಾಮ ಪಂಚಾಯಿತಿಗೆ ಭಾನುವಾರ ಹಸ್ತಾಂತರಿಸಿ ಮಾತನಾಡಿದರು.

ವೀರೇಂದ್ರ ಹೆಗ್ಗ್ಗಡೆ ಮಾರ್ಗದರ್ಶನದಿಂದ ಕೆರೆ ಅಭಿವೃದ್ಧಿಪಡಿಸಲಾಗಿದೆ. ಕೆರೆಗೆ ಹಾನಿಯಾಗದಂತೆ ನೋಡಿಕೊಳ್ಳಬೇಕು ಎಂದರು. ಯೋಜನೆ ತಾಲೂಕು ಯೋಜನಾಧಿಕಾರಿ ರಜಬ ಅಲಿ ಮಾತನಾಡಿ, ಕೆರೆ, ಬಾವಿ, ಹಳ್ಳ-ಕೊಳ್ಳ ಉಳಿಸುವುದು ನಮ್ಮ ಜವಾಬ್ದಾರಿ ಎಂದರು. ವಲಯ ಮೇಲ್ವಿಚಾರಕ ಮಹಾಂತೇಶ.ಪಿ.ಎಂ., ಕೃಷಿ ಅಧಿಕಾರಿ ಶಿವನಗೌಡ ಪಾಟೀಲ, ಗ್ರಾಪಂ ಅಧ್ಯಕ್ಷೆ ಭಾರತಿ ಲೋಕಂಡೆ, ಸಿ.ಸಿ.ಪಾಟೀಲ, ವಿಲಾಸ್ ಮೋರೆ, ಸುನಿತಾ ಸಜ್ಜನ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net