

ಲಿಂಗಸುಗೂರು: ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯ ನಿಯಮ ಮತ್ತು ಕಾನೂನುಗಳನ್ನು ಎಲ್ಲರೂ ತಪ್ಪದೇ ಪಾಲಿಸಬೇಕು. 14 ವರ್ಷದೊಳಗಿನ ಮಕ್ಕಳನ್ನು ದುಡಿಸುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ಉಂಡಿ ಮಂಜುಳಾ ಶಿವಪ್ಪ ಹೇಳಿದರು.
ಪಟ್ಟಣದಲ್ಲಿ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಪ್ರಯುಕ್ತ ಕಾನೂನು ಅರಿವು ನೆರವು ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಗುರುವಾರ ಮಾತನಾಡಿದರು.
15 ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರಗಳಲ್ಲಿ ದುಡಿಮೆಗೆ ಸೇರಿಸಿದರೆ 2 ವರ್ಷ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಲಾಗುವುದು. ಸಂವಿಧಾನದ ಕಾನೂನು, ನಿಯಮಗಳನ್ನು ಎಲ್ಲರೂ ಪಾಲಿಸಬೇಕೆಂದು ಹೇಳಿದರು.
ಪಿಐ ಪುಂಡಲೀಕ ಪಟಾತ್ತಾರ್, ಪ್ರಭಾರಿ ಬಿಇಒ ಹನುಮಂತಪ್ಪ ಕುಳಗೇರಿ, ಸಿಡಿಪಿಒ ಗೋಕುಲಸಾಬ, ಕಾರ್ಮಿಕ ನಿರೀಕ್ಷಕ ಶಾಂತಮೂರ್ತಿ, ಸಿಆರ್‌ಪಿ ಮೌನೇಶ ಇತರರಿದ್ದರು.