ವಿದ್ಯಾರ್ಥಿಗಳಲ್ಲಿ ಭಾಷಾಭಿಮಾನ ಹೆಚ್ಚಲಿ

students were felicited in bhatkal.
Published on

ಭಟ್ಕಳ: ಕನ್ನಡ ಭಾಷೆಯ ಕುರಿತು ಅಭಿಮಾನವನ್ನು ಹೊಂದುವ ಜೊತೆಗೆ ಸಾಹಿತ್ಯಾಸಕ್ತಿಯನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಇಂದಿನ ದಿನಗಳಲ್ಲಿ ಕೆಎಎಸ್, ಐಎಎಸ್ ಪರೀಕ್ಷೆಗಳನ್ನು ಸಹ ಕನ್ನಡದಲ್ಲಿಯೇ ಬರೆಯಲು ಅವಕಾಶವಿದ್ದು ಅದನ್ನು ಬಳಸಿಕೊಳ್ಳಬೇಕು ಸಾಹಿತಿ ಸೈಯ್ಯದ ಝುಮೀರುಲ್ಲಾ ಷರೀಫ್ ಹೇಳಿದರು.

ಆನಂದಾಶ್ರಮ ಪ್ರೌಢಶಾಲೆಯಲ್ಲಿ ಜಿಲ್ಲಾ ಕ.ಸಾ.ಪ. ಹಾಗೂ ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಆಯೋಜನೆಗೊಂಡ 2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಪ್ರತಿಶತ ನೂರು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್.ವಾಸರೆ ಮಾತನಾಡಿ, ಕನ್ನಡ ಭಾಷೆಯಲ್ಲಿನ ಸಾಧನೆಗೆ ಕೊಡುವ ಪುರಸ್ಕಾರವು ಮುಂದಿನ ಸಾಧನೆಗೆ ಪೂರಕವಾಗಲಿ.

ವಿದ್ಯಾರ್ಥಿಗಳು ಸಾಹಿತ್ಯಾಸಕ್ತಿ ಬೆಳೆಸಿಕೊಳ್ಳಬೇಕು. ಮೊಬೈಲನ್ನು ಜ್ಞಾನಾರ್ಜನೆಗೆ ಸಹಕಾರಿಯಾಗವ ನಿಟ್ಟಿನಲ್ಲಿ ಬಳಸಿಕೊಳ್ಳಬೇಕು, ಪ್ರತಿದಿನ ದಿನಪತ್ರಿಕೆಗಳನ್ನು ಓದುವ ಆಸಕ್ತಿ ಬೆಳೆಸಿಕೊಂಡು ಸಾಮಾನ್ಯ ಜ್ಞಾನವನ್ನೂ ಬೆಳೆಸಿಕೊಳ್ಳಬೇಕು ಎಂದು ನುಡಿದರು.

ಕ್ಷೇತ್ರಶಿಕ್ಷಣಾಧಿಕಾರಿ ವಿ.ಡಿ.ಮೊಗೇರ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ವಿತರಿಸಿದರು.

ಸಾಹಿತಿ ಮಾನಾಸುತ ಶಂಭು ಹೆಗಡೆ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪಿ.ಆರ್.ನಾಯ್ಕ, ಜಾರ್ಜ ಫರ್ನಾಂಡೀಸ್, ಕೋಶಾಧ್ಯಕ್ಷ ಮುರ್ತಜಾ ಹುಸೇನ್ ಆನೆಹೊಸುರು, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಆಧ್ಯಕ್ಷ ಉಲ್ಲಾಸ ನಾಯ್ಕ, ಆನಂದಾಶ್ರಮ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಸಿಸ್ಟರ್ ವಿನುತಾ, ಹೊನ್ನಾವರ ಕಸಾಪ ತಾಲೂಕಾಧ್ಯಕ್ಷ ಎಸ್.ಎಚ್.ಗೌಡ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಭಾಷಾ ವಿಷಯದಲ್ಲಿ ಪ್ರತಿಶತ ನೂರು ಅಂಕ ಗಳಿಸಿದ ತಾಲೂಕಿನ 103 ವಿದ್ಯಾರ್ಥಿಗಳನ್ನು, ಹಾಗೂ ವಿದ್ಯಾರ್ಥಿಗಳ ಸಾಧನೆಗೆ ಮಾರ್ಗದರ್ಶನ ನೀಡಿದ 20 ಜನ ಕನ್ನಡ ಭಾಷಾ ಶಿಕ್ಷಕರನ್ನೂ ಅಭಿನಂದಿಸಲಾಯಿತು.

ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ, ಗೌರವ ಕೋಶಾಧ್ಯಕ್ಷ ಶ್ರೀಧರ ಶೇಟ್ ಗೌರವ ಕಾರ್ಯದರ್ಶಿ ನಾರಾಯಣ ನಾಯ್ಕ, ಕಾರ್ಯಕಾರಿ ಸಮಿತಿ ಸದಸ್ಯ ಪೆಟ್ರಿಕ ಟೆಲ್ಲಿಸ್ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net