ಸಚಿವ ತಂಗಡಗಿ ಬಹಿರಂಗ ಕ್ಷಮೆಯಾಚಿಸಲಿ

Tenginakayi New News
Published on

ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ ಪರ ಘೋಷಣೆ ಕೂಗುವ ಯುವಕರಿಗೆ ಕಪಾಳ ಮೋಕ್ಷ ಮಾಡಬೇಕು ಎಂದಿರುವ ಸಚಿವ ಶಿವರಾಜ ತಂಗಡಗಿ ತಕ್ಷಣ ಬಹಿರಂಗ ಕ್ಷ್ಷೆುಯಾಚಿಸಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಒತ್ತಾಯಿಸಿದ್ದಾರೆ.

ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಟೆಂಗಿನಕಾಯಿ, ನರೇಂದ್ರ ಮೋದಿ ಒಂದೇ ಪಕ್ಷಕ್ಕೆ ಸೀಮಿತವಾಗಿಲ್ಲ. ಅವರು ದೇಶದ ಪ್ರಧಾನಿ. ಅವರ ಬಗ್ಗೆ ಮಾತನಾಡುವಾಗ ನಾಲಿಗೆ ಹಿಡಿತದಲ್ಲಿ ಇಟ್ಟುಕೊಳ್ಳಬೇಕು ಎಂದರು.

ಚುನಾವಣೆ ಸಂದರ್ಭದಲ್ಲಿ ಆರೋಪ, ಪ್ರತ್ಯಾರೋಪ ಸಹಜ. ಆದರೆ, ವೈಯಕ್ತಿಕ ಆರೋಪ ಮಾಡುವುದು ಸಮಂಜಸವಲ್ಲ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿರುವ ಶಿವರಾಜ ತಂಗಡಗಿ ಅವರ ಮಾತುಗಳು ಸಂಸ್ಕೃತಿಯ ಮಾರ್ಗದಲ್ಲಿ ಇಲ್ಲ ಎಂದು ಟೀಕಿಸಿದರು.

ಕಾಂಗ್ರೆಸ್ ಪಕ್ಷ ಮನೆಯೊಂದು ಮೂರು ಬಾಗಿಲು ಆಗಿದೆ. ಆ ಪಕ್ಷದಲ್ಲಿ ಲೋಕಸಭೆ ಚುನಾವಣೆ ಅಭ್ಯರ್ಥಿಯಾಗಲು ಸಾಕಷ್ಟು ಅಸಮಾಧಾನ, ಗೊಂದಲಗಳು ಇವೆ. ಈ ಚುನಾವಣೆಯಲ್ಲಿ ರಾಜ್ಯದ ಮತದಾರರು ಕಾಂಗ್ರೆಸ್​ಗೆ ಸೂಕ್ತ ಪಾಠ ಕಲಿಸುತ್ತಾರೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net