ಅಗತ್ಯ ಸೌಲಭ್ಯ ಕಲ್ಪಿಸಲಿ

20 HBH 01
ಹಗರಿಬೊಮ್ಮನಹಳ್ಳಿಯಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯಲ್ಲಿ ಗ್ರಾಪಂ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ಶಾಸಕ ಕೆ.ನೇಮಿರಾಜ್ ನಾಯ್ಕ, ತಹಸೀಲ್ದಾರ್ ಆರ್.ಕವಿತಾ, ಪತ್ರಕರ್ತರಾದ ವಿಶ್ವನಾಥ ಬಾವಿಕಟ್ಟಿ, ಮಜ್ಗಿ ವೀರೇಶ, ಭೀಮರಾಜ, ರಾಜವಲಿ ಗಡದ್, ಬಿ.ಕೆ.ಬಸವರಾಜ ಮತ್ತಿತರರಿದ್ದರು.
Published on

ಹಗರಿಬೊಮ್ಮನಹಳ್ಳಿ: ಪತ್ರಕರ್ತರು ವಸ್ತುನಿಷ್ಠ ವರದಿಗಳಿಗೆ ಆದ್ಯತೆ ನೀಡಬೇಕು ಎಂದು ಶಾಸಕ ಕೆ.ನೇಮಿರಾಜ್ ನಾಯ್ಕ ಹೇಳಿದರು.

ಪಟ್ಟಣ ಕನ್ಯಕಾಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕದಿಂದ ಶನಿವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪತ್ರಕರ್ತರ ಜೀವನ ಭದ್ರತೆಗಾಗಿ ಅಗತ್ಯ ಸೌಲಭ್ಯಗಳನ್ನು ಸರ್ಕಾರ ಜಾರಿಗೊಳಿಸಬೇಕು. ತಾಲೂಕು ಕೇಂದ್ರದಲ್ಲಿ ಪತ್ರಿಕಾ ಭವನ ನಿರ್ಮಾಣ ಮಾಡುವುದರೊಂದಿಗೆ ಪತ್ರಕರ್ತರಿಗೆ ನಿವೇಶನ ಕಲ್ಪಿಸಿ ಮನೆ ನಿರ್ಮಾಣ ಮಾಡಿ ಕೊಡುವುದಾಗಿ ಭರವಸೆ ನೀಡಿದರು.

ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಪಿ.ಸತ್ಯನಾರಾಯಣ ಮಾತನಾಡಿ, ಮೂರು ದಶಕಗಳ ಹೋರಾಟದ ಫಲವಾಗಿ ಸರ್ಕಾರ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಿದೆ. ಸಂಜೀವಿನಿ ಆರೋಗ್ಯ ವಿಮೆಯನ್ನೂ ಜಾರಿಗೆ ತಂದಿದೆ ಎಂದರು.

ಗ್ರಾಪಂ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ಪತ್ರಕರ್ತರ ಸಂಘದ ಪದಾಧಿಕಾರಿಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು. ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಉಚಿತ ಆಹಾರ ನೀಡುವ ಹೋಟೆಲ್ ಮಾಲೀಕ ಗಂಗಾಧರಯ್ಯ ಅವರನ್ನು ಸನ್ಮಾನಿಸಲಾಯಿತು. ತಹಸೀಲ್ದಾರ್ ಆರ್.ಕವಿತಾ, ಕನ್ನಡ ವಿಶ್ವವಿದ್ಯಾಲಯದ ಪ್ರೊ.ಎನ್ ಚಿನ್ನಸ್ವಾಮಿ, ಮಾಧ್ಯಮ ಅಕಾಡೆಮಿ ಸದಸ್ಯ ಕೆ.ನಿಂಗಜ್ಜ, ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ ಬೇವೂರು, ತಾಪಂ ಇಒ ಡಾ.ಜಿ.ಪರಮೇಶ್ವರಪ್ಪ, ಪುರಸಭೆ ಮುಖ್ಯಾಧಿಕಾರಿ ಎಂ.ಕೆ.ಮುಗಳಿ, ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಲಕ್ಷ್ಮಣ, ತಾಲೂಕು ಅಧ್ಯಕ್ಷ ಉಮಾಪತಿ ಶೆಟ್ಟರ್, ರಾಜ್ಯ ಸಮಿತಿ ಸದಸ್ಯ ವೆಂಕೋಬ ನಾಯಕ, ಎಸ್‌ಎಲ್‌ಆರ್ ಕಂಪನಿ ವ್ಯವಸ್ಥಾಪಕ ಶೇಷಸಾಯಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net