ಅಧಿಕಾರಿಗಳು ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಲಿ

03.Pyp.. 02
ಪಿರಿಯಾಪಟ್ಟಣ ತಾಲೂಕಿನ ಮಾಲಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ ಕೆ.ವೆಂಕಟೇಶ್ ಭೂಮಿಪೂಜೆ ನೆರವೇರಿಸಿದರು. ತಾ.ಪಂ.ಮಾಜಿ ಅಧ್ಯಕ್ಷೆ ಕೆ.ಆರ್.ನಿರೂಪ, ಮೈಮುಲ್ ನಿರ್ದೇಶಕ ಪ್ರಕಾಶ್ ಇದ್ದರು.
Published on

ಪಿರಿಯಾಪಟ್ಟಣ: ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಿದರೆ ತಾಲೂಕಿನ ಅಭಿವೃದ್ಧಿಗೆ ವೇಗ ದೊರೆಯಲಿದೆ ಎಂದು ಸಚಿವ ಕೆ.ವೆಂಕಟೇಶ್ ಅಭಿಪ್ರಾಯಪಟ್ಟರು.

ತಾಲೂಕಿನ ಅಳಲೂರು, ಅಬ್ಬಳತಿ, ಮುತ್ತೂರು ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಚಾಲನೆ ನೀಡಿ ಮಾತನಾಡಿ, ಈಗಾಗಲೇ ತಾಲೂಕಿನಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳೀಯವಾಗಿ ಬಗೆಹರಿಸುವಂತೆ ಅನುದಾನ ನೀಡಿದ್ದರೂ ಸಹ ಅಧಿಕಾರಿಗಳು ನಿರ್ಲಕ್ಷೃ ವಹಿಸುವುದರಿಂದ ನಮ್ಮನ್ನು ಸಾರ್ವಜನಿಕರು ದೂರುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಾರ್ವಜನಿಕ ಸಮಸ್ಯೆಗಳಿಗೆ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸಿದರೆ ನನ್ನ ಬಳಿ ದೂರು ಹೊತ್ತು ತರುವುದು ಕಡಿಮೆಯಾಗಲಿದೆ. ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ತಡೆಗಟ್ಟಲು ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ಸೂಚನೆ ನೀಡಿದರು.

ತಾಲೂಕು ಆಶ್ರಯ ಸಮಿತಿಯ ಅಧ್ಯಕ್ಷ ನಿತಿನ್ ವೆಂಕಟೇಶ್, ತಾ.ಪಂ. ಮಾಜಿ ಅಧ್ಯಕ್ಷೆ ಕೆ.ಆರ್.ನಿರೂಪಾ, ಮೈಮುಲ್ ನಿರ್ದೇಶಕ ಪ್ರಕಾಶ್, ಗ್ರಾ.ಪಂ. ಅಧ್ಯಕ್ಷರಾದ ಪೂರ್ಣಿಮಾ, ಅಕ್ಕಯ್ಯಮ್ಮ, ಉಪಾಧ್ಯಕ್ಷೆ ಜ್ಯೋತಿ, ಸದಸ್ಯರಾದ ಗೋವಿಂದರಾಜು, ನರಸಿಂಹ ಮೂರ್ತಿ, ಹರೀಶ್, ರಘು, ಎಇಇಗಳಾದ ವೆಂಕಟೇಶ್, ಮಲ್ಲಿಕಾರ್ಜುನ, ಕೃಷ್ಣಮೂರ್ತಿ, ಎಇ ದಿನೇಶ್, ಎಡಿಎ ಪ್ರಸಾದ್, ಬಿಇಒ ರವಿ ಪ್ರಸನ್ನ, ಆರ್‌ಎಐ ಪದ್ಮಶ್ರೀ, ಸಿಪಿಐ ಗೋವಿಂದ ರಾಜ್, ಪಿಡಿಒಗಳಾದ ಅಮಿತ್ ಶೆಟ್ಟಿ, ಡಾ.ಆಶಾ, ಸುರೇಶ, ಮುಖಂಡರಾದ ಎಚ್.ಆರ್.ಗೋಪಾಲ್, ರೆಹಮತ್ ಜಾನ್ ಬಾಬು, ಜಾನಕಮ್ಮ, ನಜೀರ್, ಮೋಹನ್, ಬಸಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net