ಪಾಲಕರು ಮಕ್ಕಳಿಗೆ ಸಂಸ್ಕಾರ ನೀಡಲಿ

Let the parents give rites to the children
ಮುದ್ದೇಬಿಹಾಳ ತಾಲೂಕು ಆಡಳಿತದಿಂದ ನಡೆದ ಸ್ವಾತಂತ್ರೊೃೀತ್ಸವ ಕಾರ್ಯಕ್ರಮವನ್ನು ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸಿದರು. ಬಲರಾಮ ಕಟ್ಟಿಮನಿ, ನಿಂಗಪ್ಪ ಮಸಳಿ, ಎಂ.ಬಿ.ನಾವದಗಿ, ಗಫೂರ ಮಕಾನದಾರ, ಗುರು ತಾರನಾಳ, ಕಾಮರಾಜ ಬಿರಾದಾರ ಇತರರಿದ್ದರು.
Published on

ಮುದ್ದೇಬಿಹಾಳ: ವಿವಿಧತೆಯಲ್ಲಿ ಏಕತೆ ಕಾಣುವ ದೇಶ ನಮ್ಮದು. ಭಾರತದ ಸಂವಿಧಾನದಲ್ಲಿರುವ ವಿಶೇಷತೆಯನ್ನು ನಾವೆಲ್ಲ ತಿಳಿದುಕೊಳ್ಳಬೇಕು. ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದರೆ ಸಾಲದು ಉತ್ತಮ ಸಂಸ್ಕಾರವನ್ನೂ ನೀಡಬೇಕು ಎಂದು ಶಾಸಕ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ ಹೇಳಿದರು.

ಇಲ್ಲಿನ ತಾಲೂಕು ಆಡಳಿತ ಸೌಧ ಎದುರು ತಾಲೂಕು ಆಡಳಿತದಿಂದ ಗುರುವಾರ ಏರ್ಪಡಿಸಿದ್ದ ಸ್ವಾತಂತ್ರೃ ದಿನಾಚರಣೆಯ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಮಕ್ಕಳಲ್ಲಿ ನೈತಿಕ ಮೌಲ್ಯ ಪ್ರಜ್ಞೆ ಬೆಳೆಸಬೇಕು. ಮಕ್ಕಳಿಗೆ ಸಂಸ್ಕಾರ ನೀಡದಿದ್ದಲ್ಲಿ ಮುಂದಿನ ದಿನಗಳು ಕರಾಳವಾಗಿರಲಿವೆ. ಆಡಳಿತ ನಡೆಸುವ ಜನಪ್ರತಿನಿಧಿಗಳೂ ಇದನ್ನು ಅರಿತುಕೊಳ್ಳಬೇಕು. ಶಾಸಕನಾದ ನನ್ನನ್ನೂ ಸೇರಿಸಿ ಎಲ್ಲರೂ ತಮ್ಮನ್ನು ತಾವು ತಿದ್ದಿಕೊಂಡು ಮುನ್ನಡೆಯಬೇಕು ಎಂದರು.

ತಹಸೀಲ್ದಾರ್ ಬಲರಾಮ ಕಟ್ಟಿಮನಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಮಾತನಾಡಿದರು. ಗಣ್ಯರಾದ ಎಂ.ಬಿ.ನಾವದಗಿ, ಗೂರ ಮಕಾನದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕಾಮರಾಜ ಬಿರಾದಾರ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಆರ್.ಕಟ್ಟಿಮನಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ನಿಂಗಪ್ಪ ಮಸಳಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಸಹಾಯಕ ಕೃಷಿ ನಿರ್ದೆಶಕ ಸುರೇಶ ಭಾವಿಕಟ್ಟಿ, ಕ್ಷೇತ್ರ ಸಮನ್ವಯಾಧಿಕಾರಿ ಯು.ಬಿ.ಧರಿಕಾರ, ಪಿಎಸ್‌ಐ ಸಂಜಯ ತಿಪ್ಪರಡ್ಡಿ ಸೇರಿ ತಾಲೂಕು ಮಟ್ಟದ ಅಧಿಕಾರಿಗಳು, ಪುರಸಭೆಯ ಸದಸ್ಯರು ವೇದಿಕೆಯಲ್ಲಿದ್ದರು.

ಧ್ವಜಾರೋಹಣದ ನಂತರ ಪಥಸಂಚಲನದಲ್ಲಿ ಉತ್ತಮ ಪ್ರದರ್ಶನ ನೀಡಿದ ವಿಬಿಸಿ ಪ್ರೌಢಶಾಲೆ ತಂಡ ಪ್ರಥಮ, ಅಂಜುಮನ್ ಪ್ರೌಢಶಾಲೆ ತಂಡ ದ್ವಿತೀಯ, ಆಕ್ಸ್‌ರ್ಡ್ ಪ್ರೌಢಶಾಲೆ ತಂಡ ತೃತೀಯ ಸ್ಥಾನ ಪಡೆದವು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಉತ್ತಮ ಪ್ರದರ್ಶನ ನೀಡಿದ ಚಿನ್ಮಯಿ ಜೆಸಿ ಶಾಲೆಯ ತಂಡ ಪ್ರಥಮ, ಕೆಬಿಎಂಪಿಎಸ್ ತಂಡ ದ್ವಿತೀಯ, ಬಿ.ಎಸ್.ಸೆಂಟ್ರಲ್ ಶಾಲೆಯ ತಂಡ ತೃತೀಯ ಸ್ಥಾನ ಪಡೆದುಕೊಂಡವು. ಎಲ್ಲ ತಂಡಗಳಿಗೂ ಶಾಸಕರ ಅನುಪಸ್ಥಿತಿಯಲ್ಲಿ ಬಹುಮಾನ, ಪ್ರಶಸ್ತಿ ಪತ್ರ ನೀಡಿ ಪುರಸ್ಕರಿಸಲಾಯಿತು.

ಮಹಾತ್ಮ ಗಾಂಧೀಜಿ, ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಲಾಯಿತು. ಸಂಗಮೇಶ ಶಿವಣಗಿ ತಂಡದವರು ರಾಷ್ಟ್ರಗೀತೆಗೆ ಧ್ವನಿಯಾದರು. ಶಿಕ್ಷಕ ಟಿ.ಡಿ.ಲಮಾಣಿ ನಿರೂಪಿಸಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net