ಪ್ರಾಣಿ ಹತ್ಯೆ ನಿಷೇಧ ಸಮರ್ಪಕ ಪಾಲನೆಯಾಗಲಿ

10kls3.
ಬಕ್ರಿದ್ ವೇಳೆ ಪ್ರಾಣಿಗಳ ಹತ್ಯೆ ನಿಷೇಧವನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಒತ್ತಾಯಿಸಿ ವಿಎಚ್‌ಪಿ, ಬಜರಂಗದಳ ಕಾರ್ಯಕರ್ತರು ಕಳಸ ಠಾಣಾಧಿಕಾರಿಗೆ ಮನವಿ ಸಲ್ಲಿಸಿದರು. ಅಜಿತ್ ಕುಲಾಲ್, ಜಗದೀಶ್ ಭಟ್ ಇದ್ದರು.
Published on

ಕಳಸ: ಬಕ್ರಿದ್ ವೇಳೆ ಜಾನುವಾರು ಮತ್ತು ಇತರೆ ಪ್ರಾಣಿಗಳ ಹತ್ಯೆ ನಿಷೇಧವಿದ್ದು ಅದನ್ನು ಕಟ್ಟುನಿಟ್ಟಾಗಿ ಪಾಲಿಸಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದು ಪರಿಷತ್, ಬಜರಂಗದಳದ ಕಾರ್ಯಕರ್ತರು ಕಳಸ ಠಾಣಾಧಿಕಾರಿಗೆ ಮನವಿ ಸಲ್ಲಿಸಿದರು.
ಬಕ್ರೀದ್ ಹಬ್ಬದವರೆಗೆ ತಾಲೂಕು ವ್ಯಾಪ್ತಿಯಲ್ಲಿ ಯಾವುದೇ ಅಕ್ರಮ ಜಾನುವಾರು ಸಾಗಾಟವಾಗದಂತೆ ನಾಕಾಬಂದಿ ಹಾಕಬೇಕು. ಕಿವಿಯೋಲೆ ಇಲ್ಲದ ಜಾನುವಾರುಗಳನ್ನು ಹೊರಗೆ ಮೇಯಲು ಬಿಡದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಈ ನಿಯಮ ಉಲ್ಲಂಸಿದವರ ವಿರುದ್ಧ ಜಾನುವಾರು ನಿಷೇಧ ಕಾಯ್ದೆ 2020ರಂತೆ ಪ್ರಕರಣ ದಾಖಲಿಸಬೇಕು ಎಂದು ಮನವಿ ಮಾಡಿದರು.
ವಿಶ್ವಹಿಂದು ಪರಿಷತ್ ಬಜರಂಗದಳ ಶೃಂಗೇರಿ ಜಿಲ್ಲಾ ಸಂಯೋಜಕ ಅಜಿತ್ ಕುಲಾಲ್, ಮುಖಂಡ ಜಗದೀಶ್ ಭಟ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net