ಸಾರ್ವಜನಿಕ ಆಸ್ಪತ್ರೆ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಲಿ

18 ckm 2
ಚಿಕ್ಕಮಗಳೂರಿನ ವಿಜಯಪುರದಲ್ಲಿ ಬುಧವಾರ ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆರಂಭಿಸಲಾದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಉದ್ಘಾಟಿಸಿದರು. ಸಿ.ಟಿ.ರವಿ, ಎಚ್.ಡಿ.ತಮ್ಮಯ್ಯ, ಡಾ.ಅಶ್ವಥ್ ಬಾಬು, ಡಾ.ಮೋಹನ್ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಆರೋಗ್ಯ ಮತ್ತು ಶಿಕ್ಷಣವನ್ನು ಪ್ರತಿಯೊಬ್ಬ ನಾಗರೀಕರನೂ ಪಡೆಯಬೇಕೆಂಬ ಸಂವಿಧಾನ ಬದ್ಧವಾದ ಹಕ್ಕನ್ನು ಈವರೆಗೆ ಈಡೇರಿಸಲು ಸಾಧ್ಯವಾಗಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ವಿಷಾಧ ವ್ಯಕ್ತಪಡಿಸಿದರು.

ನಗರದ ವಿಜಯಪುರದಲ್ಲಿ ಬುಧವಾರ ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆರಂಭಿಸಲಾದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.
ಪಟ್ಟಣ ಪ್ರದೇಶದಲ್ಲಿ ಈ ಆಸ್ಪತ್ರೆ ಸಾರ್ವಜನಿಕವಾಗಿ ಉತ್ತಮ ರೀತಿಯಲ್ಲಿ ಕೆಲಸ ಮಾಡಬೇಕೆಂಬುದು ಆಶಯವಾಗಿದೆ. ಆದರೆ ಇಲ್ಲಿ ದಿನದ ೨೪ ಗಂಟೆಯೂ ವೈದ್ಯರು ಮತ್ತು ದಾದಿಯರು ಇರುವುದರ ಜೊತೆಗೆ ಉತ್ತಮ ಆರೋಗ್ಯ ಸೇವೆ ಸಾರ್ವಜನಿಕರಿಗೆ ಸಿಗುವಂತಾಗಲಿ ಎಂದು ಹಾರೈಸಿದರು.
ನಗರದ ನಾಗರೀಕರು ಈ ಪ್ರಾಥಮಿಕ ಆರೋಗ್ಯ ಕೇಂದ್ರದ ಸದುಪಯೋಗವನ್ನು ಪಡೆದುಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳುವಂತೆ ಮನವಿ ಮಾಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಮಾತನಾಡಿ, ನಗರದ ಕೇಂದ್ರ ಭಾಗದಲ್ಲಿ ಆರಂಭಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ಸಾರ್ವಜನಿಕರ ಅನುಕೂಲಕ್ಕಾಗಿ ಮುಂದಿನ ದಿನಗಳಲ್ಲಿ ಸರ್ಕಾರದ ಅನುದಾನದ ಜೊತೆಗೆ ಸಿಎಸ್‌ಆರ್ ಅನುದಾನ ಬಳಸಿ ಹಿರೇಮಗಳೂರು ಆಸ್ಪತ್ರೆ ಮಾದರಿಯಲ್ಲಿ ಸುಸಜ್ಜಿತ ಆಸ್ಪತ್ರೆಯನ್ನಾಗಿ ಮಾಡಲು ತೀರ್ಮಾನಿಸಲಾಗಿದೆ ಎಂದು ಭರವಸೆ ನೀಡಿದರು.
ಈಗಾಗಲೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮುಂದಿನ ವರ್ಷದ ಡಿಸೆಂಬರ್ ವೇಳೆಗೆ ಉದ್ಘಾಟನೆಯಾಗಲಿದೆ. ಮೆಡಿಕಲ್ ಕಾಲೇಜು ಕಾಮಗಾರಿ ಈ ವರ್ಷ ಸಂಪೂರ್ಣವಾಗಿ ಮುಗಿದು ಲೋಕಾರ್ಪಣೆಗೊಳ್ಳಲಿದೆ ಎಂದರು.
ಉತ್ತಮ ಗುಣಮಟ್ಟದ ಚಿಕಿತ್ಸೆ ಸ್ಥಳೀಯ ಆಸ್ಪತ್ರೆಗಳಲ್ಲಿ ದೊರೆಯಬೇಕೆಂಬ ಉz್ದೆÃಶದಿಂದ ಈ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಇಂದು ಆರಂಭಿಸಲಾಗಿದೆ. ಇಂದು ಶಿಕ್ಷಣ ಮತ್ತು ಆರೋಗ್ಯ ಪಡೆಯುವುದು ಸವಾಲಾಗಿದ್ದು, ಹಿಂದೆ ಪ್ರಕೃತಿ ಜೊತೆ ಜನರು ಹೊಂದಿಕೊAಡ ಪರಿಣಾಮ ಆರೋಗ್ಯವಾಗಿ, ಆನಂದದಿAದ ಇದ್ದರು ಎಂದು ಹೇಳಿದರು.
ಈಗ ವಿಜ್ಞಾನ ಮುಂದುವರೆದಿದೆ. ಹೊಸಹೊಸ ಚಿಕಿತ್ಸಾ ವಿಧಾನಗಳನ್ನು ಕಂಡುಕೊಳ್ಳಲಾಗಿದೆ. ಇದಕ್ಕೆ ಸವಾಲಾಗಿ ರೋಗಗಳು ಹೆಚ್ಚಾಗುತ್ತಿವೆ. ಹಿಂದೆ ಡೆಂಘೆ ಜ್ವರದ ಹೆಸರೇ ಕೇಳಿರಲಿಲ್ಲ. ಪ್ಲೇಟ್‌ಲೇಟ್ಸ್ ಹೆಸರೇ ಗೊತ್ತಿರಲಿಲ್ಲ. ಜೀವನ ಪದ್ಧತಿ, ಆರೋಗ್ಯದಲ್ಲಿ ಬದಲಾವಣೆಗಳು ಆಗಿರುವುದು ಪರಿಸರದ ಮೇಲೆ ಆಗಿರುವ ದುಷ್ಪರಿಣಾಮ ಪ್ರಮುಖ ಕಾರಣ ಎಂದು ವಿಷಾಧಿಸಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್.ಡಿ ತಮ್ಮಯ್ಯ ಮಾತನಾಡಿ, ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಉತ್ತಮ ಆರೋಗ್ಯ ಸೇವೆಯನ್ನು ಪಡೆಯಲು ಸಾರ್ವಜನಿಕರು ಈ ಆಸ್ಪತ್ರೆಯನ್ನು ಸದುಪಯೋಗಪಡಿಸಿಕೊಳ್ಳಬೇಕು. ಆರೋಗ್ಯವೇ ಭಾಗ್ಯ ಎಂಬ ಉz್ದÉÃಶದಿಂದ ಸರ್ಕಾರ ಸ್ಥಳೀಯವಾಗಿ ಜನರಿಗೆ ಕೈಗೆಟುಕಬೇಕೆಂಬ ದೃಷ್ಟಿಯಿಂದ ಆಸ್ಪತ್ರೆಗಳನ್ನು ತೆರೆಯಲು ಮುಂದಾಗಿದೆ ಎಂದರು.
ಈ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ದಾದಿಯರು ಆಸ್ಪತ್ರೆಗೆ ಬರುವ ರೋಗಿಗಳ ಆರೋಗ್ಯ ಕಾಪಾಡಲು ಸಹಕರಿಸಿ ಒಳ್ಳೆಯ ಸೇವೆ ಸಲ್ಲಿಸಿ ಎಂದು ಶುಭ ಹಾರೈಸಿದರು.
ವೈದ್ಯೋ ನಾರಾಯಣ ಹರಿ ಎಂದರೆ ಸಾಲದು. ವೈದ್ಯರ ಮೇಲೆ ಹಲ್ಲೆ ನಡೆಸಿದವರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾದಾಗ ಅವರಿಗೆ ತಪ್ಪಿನ ಅರಿವು ಆಗುತ್ತದೆ. ಇದು ಆಗದಿದ್ದರೆ ವೈದ್ಯರ ನೈತಿಕ ಶಕ್ತಿ ಕುಂದಿಸಿದAತಾಗುತ್ತದೆ ಎಂದು ವೈದ್ಯರಿಗೆ ದೈರ್ಯ ತುಂಬಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವಥ್ ಬಾಬು, ಜಿಲ್ಲಾ ಸರ್ಜನ್ ಡಾ. ಮೋಹನ್ ಕುಮಾರ್, ನಗರಸಭೆ ಸದಸ್ಯ ಸಿ.ಪಿ ಲಕ್ಷö್ಮಣ, ಯಮುನಾ ಚನ್ನಬಸಪ್ಪ ಶೆಟ್ಟಿ, ತಾರಾ ಭೋಜೇಗೌಡ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net