ಮಳೆನೀರು ಭೂಮಿಯಲ್ಲಿ ಇಂಗುವಂತೆ ಮಾಡಿ

01-MAR-GPT-2A-BARAGI
ಗುಂಡ್ಲುಪೇಟೆ ತಾಲೂಕಿನ ಶಿಂಡನಪುರ ಸಮೀಪ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗೆ ಗಣೇಶ್ ಪ್ರಸಾದ್ ಭೂಮಿಪೂಜೆ ನೆರವೇರಿಸಿದರು. ಚನ್ನಾಜಮ್ಮ, ಕೆ.ಎನ್.ಮಾದಪ್ಪ, ನಾಗೇಶ್‌ನಾಯ್ಕ, ಸ್ವಾಮಿ, ಕೆ.ಪಿ.ರಾಜಪ್ಪ ಇದ್ದರು.
Published on

ಗುಂಡ್ಲುಪೇಟೆ: ಆದ್ಯತೆ ಮೇರೆಗೆ ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಗೆ ಅನುದಾನ ನೀಡಲಾಗುತ್ತಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.

ತಾಲೂಕಿನ ಶಿಂಡನಪುರ ಸಮೀಪ ಸಣ್ಣ ನೀರಾವರಿ ಇಲಾಖೆಯಿಂದ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಮಳೆನೀರು ಭೂಮಿಯಲ್ಲಿ ಇಂಗುವಂತೆ ಮಾಡಿ ಜಲಸಂರಕ್ಷಣೆ ಮಾಡಬೇಕಾಗಿರುವುದರಿಂದ 60 ಲಕ್ಷ ರೂ.ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ ಮಾಡಲಾಗುತ್ತಿದೆ. ಸರ್ಕಾರದಿಂದ ಅನುದಾನ ಬರುತ್ತಿದ್ದಂತೆ ಗ್ರಾಮಾಂತರ ಪ್ರದೇಶಗಳ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಕೆಲಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚನ್ನಾಜಮ್ಮ, ಮಾಜಿ ಅಧ್ಯಕ್ಷ ಕೆ.ಎನ್.ಮಾದಪ್ಪ, ಸದಸ್ಯರಾದ ನಾಗೇಶ್‌ನಾಯ್ಕ, ಸ್ವಾಮಿ, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಮುಖಂಡರಾದ ಕೆ.ಪಿ.ರಾಜಪ್ಪ, ಸೋಮಪ್ಪ, ಸೂರಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net