ಗಂಗಾವತಿ: ಕರ್ತವ್ಯ ಒತ್ತಡದ ನಡುವೆಯೂ ಸರ್ಕಾರದ ಯೋಜನೆಗಳನ್ನು ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ಶ್ರಮಿಸಬೇಕಿದ್ದು, ಲೋಪವಾಗದಂತೆ ಎಚ್ಚರಿಕೆವಹಿಸಬೇಕೆಂದು ಗ್ಯಾರಂಟಿ ಯೋಜನೆಗಳ ಅನುಷ್ಠಾ ಸಮಿತಿ ಜಿಲ್ಲಾ ಉಪಾಧ್ಯಕ್ಷ ಎಸ್.ಬಿ.ಖಾದ್ರಿ ಹೇಳಿದರು.
ನಗರದ ತಾಪಂ ಮಂಥನ ಸಭಾಂಗಣದಲ್ಲಿ ತಾಲೂಕು ಆಡಳಿತ ಸೋಮವಾರ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆ ಅನುಷ್ಠಾನ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.
ಪಡಿತರ ಹಂಚಿಕೆಯಲ್ಲಿ ಲೋಪವಾಗುತ್ತಿರುವ ದೂರುಗಳು ಬರುತ್ತಿದ್ದು, ಆಹಾರ ಇಲಾಖೆ ಸಿಬ್ಬಂದಿ ನ್ಯಾಯಬೆಲೆ ಅಂಗಡಿಗಳ ಮೇಲೆ ದಿಢೀರ್ ದಾಳಿ ನಡೆಸುವ ಮೂಲಕ ವಾಸ್ತವ ಮಾಹಿತಿ ಪಡೆಯಬೇಕು.
ಪಡಿತರ ಹಂಚಿಕೆಯಲ್ಲಿ ವ್ಯತ್ಯಾಸವಾಗಿದ್ದರೆ ಸಂಬಂಧಟ್ಟ ಮಾಲೀಕರ ವಿರುದ್ಧ ಕ್ರಮಕ್ಕೆ ಶಿಾರಸು ಮಾಡಬೇಕು. ಲಾನುಭವಿಗಳ ಸಂಖ್ಯೆ ಹೆಚ್ಚಾಗಿದ್ದರೆ ಹೆಚ್ಚುವರಿ ನ್ಯಾಯಬೆಲೆ ಮಂಜೂರಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಅಕ್ಕಿ ಮತ್ತು ಜೋಳ ವಿತರಣೆಯಾಗುತ್ತಿದ್ದು, ಲಾನುಭವಿಗಳಿಗೆ ಕಡಿಮೆ ಹಂಚಿಕೆಯಾಗದಂತೆ ಎಚ್ಚರಿಕೆವಹಿಸಬೇಕು ಎಂದು ಸೂಚನೆ ನೀಡಿದರು.