

ಮಸ್ಕಿ: ಭಾರತದ ಸಂವಿಧಾನ ಮತ್ತು ಕಾನೂನು ಬಲಿಷ್ಠವಾಗಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಇಲ್ಲಿನ ಜೆಎಂಎಫ್‌ಸಿ ನ್ಯಾಯಾಧೀಶೆ ರೂಪಾ ಶ್ರೀವಗ್ಗಾ ಹೇಳಿದರು.
ಪಟ್ಟಣದ ಶ್ರೀ ಭ್ರಮರಾಂಬ ದೇವಸ್ಥಾನದಲ್ಲಿ ಶುಕ್ರವಾರ ಕಾನೂನು ಸೇವಾ ಸಮಿತಿ ಸಿಂಧನೂರು ಮತ್ತು ಮಸ್ಕಿ ನ್ಯಾಯವಾದಿಗಳ ಸಂಘದಿಂದ ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಏರ್ಪಡಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಂವಿಧಾನದಡಿ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ನೀಡಲಾಗಿದೆ. ಅವುಗಳನ್ನು ಪಾಲನೆ ಮಾಡಿದರೆ ಸಮಸ್ಯೆಗಳು ಉದ್ಭವಿಸುವುದಿಲ್ಲ. ದೈನಂದಿನ ಬದುಕಿಗೆ ಬೇಕಾಗುವ ಕಾನೂನಿನ ಅರಿವು ಎಲ್ಲರೂ ತಿಳಿದುಕೊಳ್ಳುವುದು ಮುಖ್ಯವಾಗಿದೆ ಎಂದರು.