ಕೊಳಚೆ ನಿರ್ಮೂಲನಾ ಮಂಡಳಿ ಹಕ್ಕು ಪತ್ರ ವಿತರಿಸಲಿ

07M.D.R.1
ರಾಷ್ಟ್ರೀಯ ಮಾನವ ಹಕ್ಕಗಳ ರಕ್ಷಣಾ ಪಡೆ ವತಿಯಿಂದ ಮದ್ದೂರು ಪುರಸಭೆ ಮುಖ್ಯಾಧಿಕಾರಿ ಕರಿಬಸವಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಸಿ.ಎಚ್.ಚಂದ್ರಕುಮಾರ್, ಶಿವಲಿಂಗಯ್ಯ ಇದ್ದರು.
Published on

ಮದ್ದೂರು: ಪಟ್ಟಣ ವ್ಯಾಪ್ತಿಯಲ್ಲಿ ಮನೆ ನಿರ್ಮಿಸಿಕೊಂಡು ವಾಸ ಮಾಡುತ್ತಿರುವವರಿಗೆ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಹಕ್ಕು ಪತ್ರ ನೀಡಬೇಕೆಂದು ಒತ್ತಾಯಿಸಿ ರಾಷ್ಟ್ರೀಯ ಮಾನವ ಹಕ್ಕಗಳ ರಕ್ಷಣಾ ಪಡೆ ವತಿಯಿಂದ ಪುರಸಭೆಯಲ್ಲಿ ಮುಖ್ಯಾಧಿಕಾರಿ ಕರಿಬಸವಯ್ಯ ಅವರಿಗೆ ಮಂಗಳವಾರ ಮನವಿ ಪತ್ರ ಸಲ್ಲಿಸಲಾಯಿತು.

ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಸಿ.ಎಚ್.ಚಂದ್ರಕುಮಾರ್ ಮಾತನಾಡಿ, ಕೊಳಚೆ ನಿರ್ಮೂಲನಾ ಮಂಡಳಿ ವಾಸ ಮಾಡಲು ಮನೆಗಳನ್ನು ನಿರ್ಮಿಸಿಕೊಟ್ಟಿರುವುದರಿಂದ ನಿವಾಸಿಗಳಿಗೆ ಹಕ್ಕು ಪತ್ರ ನೀಡಬೇಕು ಎಂದು ಒತ್ತಾಯಿಸಿದರು.

ಹಲವು ವರ್ಷಗಳಂದ ಸರ್ಕಾರಿ ಭೂಮಿಯಲ್ಲಿ ಮನೆ ನಿರ್ಮಿಸಿಕೊಂಡು ವಾಸ ಮಾಡುತ್ತಿರುವ ಬಡವರಿಗೆ ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲ ದಾಖಲಾತಿಗಳನ್ನು ಒದಗಿಸಿದ್ದು, ಇವರಿಗೆ ಹಕ್ಕು ಪತ್ರ ನೀಡಬೇಕು. ಇಲ್ಲದಿದ್ದರೆ ಸಂಘಟನೆ ವತಿಯಿಂದ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಪುರಸಭಾ ಮುಖ್ಯಾಧಿಕಾರಿ ಕರಿಬಸವಯ್ಯ, ಈ ಸಂಬಂಧ ಅಧಿಕಾರಿಗಳ ಗಮನಕ್ಕೆ ತಂದು ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸಂಘಟನೆಯ ಪದಾಧಿಕಾರಿಗಳಾದ ಶಿವಲಿಂಗಯ್ಯ, ಮಂಜುನಾಥ್, ಪ್ರಸನ್ನ, ಸಿದ್ದರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net