ರಾಜ್ಯ ಸರ್ಕಾರ ಕೂಡಲೇ ಬರ ಘೋಷಿಸಲಿ: ಆರಗ

araga
ಆರಗ ಜ್ಞಾನೇಂದ್ರ, ಶಾಸಕ.
Published on

ಶಿವಮೊಗ್ಗ: ರಾಜ್ಯ ಸರ್ಕಾರ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಅಧಿಕಾರಕ್ಕೆ ಬಂದು ನಾಲ್ಕು ತಿಂಗಳಾದರೂ ಇನ್ನೂ ಆಡಳಿತಕ್ಕೆ ಹೊಂದಿಕೊಂಡಂತೆ ಕಾಣುತ್ತಿಲ್ಲ ಎಂದು ಶಾಸಕ ಆರಗ ಜ್ಞಾನೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ತಾಲೂಕುಗಳಲ್ಲೂ ಕನಿಷ್ಠ ಮಳೆಯಾಗಿದೆ. ಕೂಡಲೇ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಬೇಕು. ಕೇಂದ್ರ ಸರ್ಕಾರ ಎಷ್ಟು ಪರಿಹಾರ ನೀಡುವುದೋ ನೋಡೋಣ. ಮೊದಲು ರಾಜ್ಯ ಸರ್ಕಾರ ಬರ ನಿರ್ವಹಣೆ ಹಾಗೂ ಪರಿಹಾರಕ್ಕೆ ಹಣ ಬಿಡುಗಡೆ ಮಾಡಲಿ ಎಂದು ಒತ್ತಾಯಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀರಿನ ಮೂಲವಿದ್ದರೂ ನೀರು ಹರಿಸಲು ಪಂಪ್‌ಸೆಟ್‌ಗಳಿಗೆ ವಿದ್ಯುತ್ ಇಲ್ಲದಂತಾಗಿದೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಭತ್ತಕ್ಕೆ ಉತ್ತಮ ಬೆಲೆ ಬಂದಿದೆ. ಆದರೆ ಬೆಳೆಯಲು ಆಗುತ್ತಿಲ್ಲ. ಬಿಸಿಲಿನಿಂದ ಭತ್ತಕ್ಕೆ ಬೆಂಕಿ ರೋಗ ತಗುಲಿದೆ. ಸರ್ಕಾರ ಇನ್ನಾದರೂ ಎಚ್ಚೆತ್ತುಕೊಳ್ಳಲಿ ಎಂದು ಆಗ್ರಹಿಸಿದರು.
ಕಾವೇರಿ ವಿಷಯದಲ್ಲಿ ನ್ಯಾಯಾಧಿಕರಣಕ್ಕೆ ಮನವರಿಕೆ ಮಾಡಿಕೊಡುವಲ್ಲಿ ಸರ್ಕಾರ ವಿಫಲವಾಗಿದೆ. ಇದೇ ಕಾರಣಕ್ಕೆ ನಮ್ಮ ರೈತರು ಸಮಸ್ಯೆಯಲ್ಲಿದ್ದರೂ ತಮಿಳುನಾಡಿಗೆ ನೀರು ಹರಿಸುವ ಪ್ರಮೇಯ ಎದುರಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಸರ್ಕಾರ ತುಂಬಾ ಲಘುವಾಗಿ ಪರಿಗಣಿಸಿದಂತೆ ಕಾಣುತ್ತಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net