ವಿದ್ಯಾರ್ಥಿಗಳು ಉತ್ತಮ ಜೀವನ ರೂಪಿಸಿಕೊಳ್ಳಲಿ

lkp 18-1 jagriti
ಲೋಕಾಪುರ ಪಟ್ಟಣದಲ್ಲಿ ಪಿಎಸ್‌ಐ ಕಾಡಪ್ಪ ಜಕ್ಕನ್ನವರ ನೇತೃತ್ವದಲ್ಲಿ ಅಪರಾಧ ತಡೆ ಮಾಸಾಚರಣೆ ನಡೆಯಿತು. ಶಾಲಾ ವಿದ್ಯಾರ್ಥಿಗಳು, ಆಟೋ ಚಾಲಕರು, ಸಾರ್ವಜನಿಕರು, ಪೊಲೀಸ್ ಸಿಬ್ಬಂದಿ ಇದ್ದರು.
Published on

ಲೋಕಾಪುರ: ವಿದ್ಯಾರ್ಥಿಗಳು ಉತ್ತಮ ಜೀವನ ರೂಪಿಸಿಕೊಳ್ಳಲು ಅಧ್ಯಯನಶೀಲರಾಗಿ ಅಪರಾಧ ಕೃತ್ಯಗಳಿಂದ ದೂರು ಉಳಿಯಬೇಕೆಂದು ಪಿಎಸ್‌ಐ ಕಾಡಪ್ಪ ಜಕ್ಕನ್ನವರ ಹೇಳಿದರು.

ಪಟ್ಟಣದ ಪ್ರಮುಖ ವಾರ್ಡ್‌ಗಳಲ್ಲಿ ಅಪರಾಧ ತಡೆ ಮಾಸಾಚರಣೆ ನಿಮಿತ್ತ ನಡೆದ ಜಾಗೃತಿ ಕಾರ‌್ಯಕ್ರಮದಲ್ಲಿ ಅವರು ಮಾತನಾಡಿದರು.

ಯುವಕರು ಸಮಾಜದ ಸ್ವಾಸ್ಥೃ ಕಾಪಾಡುವಲ್ಲಿ ಸಹಕರಿಸಬೇಕು. ತಾವು ನೆಲೆಸಿರುವ ಪ್ರದೇಶದಲ್ಲಿ ತಮ್ಮ ನೆರೆಹೊರೆಯವರಿಗೆ, ಕುಟುಂಬದವರಿಗೆ ಹಾಗೂ ಸಮಾಜದ ಇತರೆ ಜನರಿಗೆ ಅಪರಾಧ ತಡೆಗಳ ಕುರಿತು ತಿಳಿವಳಿಕೆ ಹೇಳಬೇಕು. ಅಪ್ರಾಪ್ತ ಮಕ್ಕಳಿಗೆ ವಾಹನ ಚಲಾಯಿಸದಂತೆ ಪಾಲಕರು ಸಲಹೆ ನೀಡಬೇಕು. ಮಕ್ಕಳು ಚಾಲನಾ ಪ್ರಮಾಣ ಪತ್ರ ಪಡೆದ ನಂತರವಷ್ಟೇ ರಸ್ತೆಗಳಲ್ಲಿ ವಾಹನ ಚಲಾಯಿಸಬೇಕು. ಮಾರುಕಟ್ಟೆ, ರಾಜ್ಯ ಹೆದ್ದಾರಿಯಲ್ಲಿ ವಾಹನ ನಿಲುಗಡೆಗಾಗಿ ಆಯ್ಕೆ ಮಾಡಿದ ಸ್ಥಳಗಳಲ್ಲೇ ವಾಹನ ನಿಲ್ಲಿಸಿ ಜನತೆಗೆ ಅನುಕೂಲ ಮಾಡಿಕೊಡಬೇಕು ಎಂದರು.

ಜಿಲ್ಲೆಯಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಸೈಬರ್ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಪೊಲೀಸ್ ಇಲಾಖೆ 1930 ಸಹಾಯವಾಣಿ ಪ್ರಾರಂಭಿಸಿದೆ ಎಂದು ತಿಳಿಸಿದರು.

ಪೊಲೀಸ್ ಇಲಾಖೆ ಸಿಬ್ಬಂದಿ ನಿಂಗರಾಜ ಕೂಡ್ಲಿ, ಆಟೋಚಾಲಕರು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು, ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net