ವಿದ್ಯಾರ್ಥಿಗಳು ಕ್ರೀಯಾಶೀಲತೆ ರೂಢಿಸಿಕೊಳ್ಳಲಿ

17 GVT 03
ಗಂಗಾವತಿ ತಾಲೂಕಿನ ಬಸಾಪಟ್ಟಣದ ಸ.ಪ್ರೌ.ಶಾಲೆಯಲ್ಲಿ ಶ್ರೀ ಕ್ಷೇತ್ರದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ನ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಾಗಾರವನ್ನು ಗ್ರಾಪಂ ಅಧ್ಯಕ್ಷ ಆಂಜನೇಯ ಸೋಮವಾರ ಉದ್ಘಾಟಿಸಿದರು. ಸಂಪನ್ಮೂಲವ್ಯಕ್ತಿ ಎ.ಕೆ.ಮಹೇಶಕುಮಾರ, ಟ್ರಸ್ಟ್ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ಹಿರಿಂಜ,ಎಸ್ಡಿಎಂಸಿ ಅಧ್ಯಕ್ಷ ಭಾಷಾಸಾಬ್ ಇತರರಿದ್ದರು.
Published on

ಗಂಗಾವತಿ: ದುಶ್ಚಟಗಳು ದೈಹಿಕ ಮತ್ತು ಮಾನಸಿಕ ಒತ್ತಡಕ್ಕೆ ಕಾರಣವಾಗಲಿದ್ದು, ಏಕಾಗ್ರತೆ ಕಳೆದುಕೊಳ್ಳಬೇಕಾಗುತ್ತದೆ ಎಂದು ಎಸ್‌ಕೆಎನ್‌ಜಿ ಸರ್ಕಾರಿ ಪದವಿ ಕಾಲೇಜು ಉಪನ್ಯಾಸಕ ಹಾಗೂ ಸಂಪನ್ಮೂಲ ವ್ಯಕ್ತಿ ಎ.ಕೆ.ಮಹೇಶಕುಮಾರ ಹೇಳಿದರು.

ತಾಲೂಕಿನ ಬಸಾಪಟ್ಟಣದ ಸ.ಪ್ರೌ.ಶಾಲೆಯಲ್ಲಿ ಶ್ರೀ ಕ್ಷೇತ್ರದ ಧರ್ಮಸ್ಥಳ ಗ್ರಾಮಿಣಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ನ ಬಸಾಪಟ್ಟಣ ವಲಯದಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದಡಿ ಸೋಮವಾರ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ಕ್ಷಣಿಕ ದುರಾಸೆಗಳು ಜೀವನದಲ್ಲಿ ಎಲ್ಲ ಹಾಳು ಮಾಡುತ್ತಿದ್ದು, ಆರೋಗ್ಯದೊಂದಿಗೆ ಕುಟುಂಬವನ್ನು ಕಳೆದುಕೊಳ್ಳುವ ಸ್ಥಿತಿ ಬರಲಿದೆ. ಉತ್ತಮ ಹವ್ಯಾಸದ ಜತೆಗೆ ಕ್ರೀಯಾಶೀಲತೆಯನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕಿದ್ದು, ದುಶ್ಚಟಗಳ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವಂತೆ ಸಲಹೆ ನೀಡಿದರು.

ಟ್ರಸ್ಟ್ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ಹಿರಿಂಜ ಮಾತನಾಡಿ, ಆರ್ಥಿಕ ಸಬಲೀಕರಣದ ಜತೆಗೆ ಸ್ವಸ್ಥ ಸಮಾಜ ನಿರ್ಮಾಣದ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ. ಕಾರ್ಯಾಗಾರದ ಮೂಲಕ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು.

ಮುಖ್ಯಶಿಕ್ಷಕ ಹನುಮೇಶ, ಶಿಕ್ಷಕ ಶಿವಾನಂದ, ಟ್ರಸ್ಟ್ ವಲಯ ಮೇಲ್ವಿಚಾರಕ ಎಸ್.ಬಿ.ವಿಠ್ಠಲ, ಸೇವಾ ಪ್ರತಿನಿಧಿಗಳಾದ ತಸ್ನೀಮ್, ರತ್ನಮ್ಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net