

ಮಾನ್ವಿ: ವಿದ್ಯಾರ್ಥಿಗಳಲ್ಲಿ ದೇಶದ ಚರಿತ್ರೆ ಹಾಗೂ ಸಂವಿಧಾನದ ಮೌಲ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ತಾಲೂಕು ಯುವ ಕಾಂಗ್ರೆಸ್ ಸಮಿತಿ ಪ್ರಬಂಧ ಸ್ಪರ್ಧೆ ಆಯೋಜಿಸಿರುವುದು ಉತ್ತಮ ಕಾರ್ಯ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಗಫೂರ್‌ಸಾಬ್ ಹೇಳಿದರು.
ರಾಷ್ಟ್ರೀಯ ಯುವ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಪಟ್ಟಣದ ಭಾರತ ಜೋಡೊ ಭವನದಲ್ಲಿ ಮಂಗಳವಾರ ತಾಲೂಕು ಯುವ ಕಾಂಗ್ರೆಸ್ ಸಮಿತಿಯು ಪಿಯು, ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.ವಿದ್ಯಾರ್ಥಿಗಳಲ್ಲಿ ದೇಶದ ಬಗ್ಗೆ ಅಭಿಮಾನ ಬೆಳೆಯಬೇಕು ಎಂದರು.
ಸಂವಿಧಾನದ ಮಹತ್ವ ವಿಷಯ ಕುರಿತು ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ತಾಲೂಕಿನ ವಿವಿಧ ಕಾಲೇಜುಗಳ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪ್ರಥಮ ಸ್ಥಾನ ಪಡೆದ ಶ್ವೇತಾಗೆ 15 ಸಾವಿರ ರೂ., ದ್ವಿತೀಯ ಸ್ಥಾನ ಪಡೆದ ಅಂಜುಮ ಫಾತೀಮಾಗೆ 10 ಸಾವಿರ ರೂ., ತೃತೀಯ ಸ್ಥಾನ ಪಡೆದ ಭೀಮಮ್ಮಗೆ 5 ಸಾವಿರ ರೂ. ಬಹುಮಾನ ನೀಡಲಾಯಿತು. ಕಾಂಗ್ರೆಸ್ ಮುಖಂಡರಾದ ಶಿವರಾಜ ವಕೀಲ, ರಾಜಾ ಸುಭಾಶ್ಚಂದ್ರ ನಾಯಕ, ಸೈಯ್ಯದ್ ಖಾಲಿದ್‌ಗುರು, ಪ್ರವೀಣ್ ಕುಮಾರ, ಮಹಾಂತೇಶ ಸ್ವಾಮಿ ರೌಡೂರು, ಮರಿಸ್ವಾಮಿ, ಫಯಾಜುದ್ದೀನ್, ತಿಪ್ಪಣ್ಣ ಬಾಗಲವಾಡ ಇತರರಿದ್ದರು.