ವಿದ್ಯಾರ್ಥಿಗಳು ಅಭ್ಯಾಸದತ್ತ ಚಿತ್ತಹರಿಸಲಿ

MDG KANUNU ARIVU NERAVU
Published on

ಮುಂಡರಗಿ: ಇಂದಿನ ಮಕ್ಕಳು ನಾಳೆಯ ಪ್ರಜೆಗಳು. ಹೀಗಾಗಿ ಕಾನೂನು ಪಾಲನೆಯೊಂದಿಗೆ ಅದರ ಬಗ್ಗೆ ಅರಿವು ಹೊಂದಬೇಕು. ವಿದ್ಯಾರ್ಥಿಗಳು ದುಶ್ಚಟ, ಆನ್​ಲೈನ್ ಗೇಮ್ ಆಡದೆ ಅಭ್ಯಾಸದತ್ತ ಹೆಚ್ಚಿನ ಗಮನ ಹರಿಸುವ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಭರತ್ ಯೋಗೇಶ ಕರಗುದರಿ ಹೇಳಿದರು.

ತಾಲೂಕಿನ ಕಲಕೇರಿ ಗ್ರಾಮದ ಎಂ.ಬಿ. ಪಾಟೀಲ ಸ್ವಾತಂತ್ರ ಪದವಿಪೂರ್ವ ಕಾಲೇಜ್​ನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಮತ್ತು ತಾಲೂಕು ವಕೀಲರ ಸಂಘದ ಆಶ್ರಯದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಾಲೇಜು ಸಂಸತ್ ಉದ್ಘಾಟಿಸಿದ ದಿವಾಣಿ ನ್ಯಾಯಾಧೀಶೆ ಜ್ಯೋತಿ ಕಾಗಿನಕರ ಮಾತನಾಡಿ, ವಿದ್ಯಾರ್ಥಿಗಳು ಓದುವ ಸಮಯದಲ್ಲಿ ಮನಸು, ಮನಸ್ಥಿತಿ ನಿಯಂತ್ರಣದಲ್ಲಿಟ್ಟುಕೊಳ್ಳಬೇಕು ಎಂದರು.

ಮಾಜಿ ಸಚಿವ ಎಸ್.ಎಸ್. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ವಕೀಲರ ಸಂಘದ ಅಧ್ಯಕ್ಷ ಎ.ಕೆ. ಜೈನ್ ಮಾತನಾಡಿದರು. ಕಲಕೇರಿ-ವಿರೂಪಾಪೂರದ ಶ್ರೀ ಮುದುಕೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಉತ್ತಮ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net