ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಮಹತ್ವ ಅರಿಯಲಿ

27 NRD 6
Published on

ನರಗುಂದ: ತಾಲೂಕಿನ ಚಿಕ್ಕನರಗುಂದ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು. ಬಿಎಲ್‌ಒ ವಿಜಯಲಕ್ಷ್ಮಿ ಹಿರೇಮಠ, ಮಾತನಾಡಿ, ಭಾರತ ಜಗತ್ತಿನಲ್ಲಿಯೇ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿದ ರಾಷ್ಟ್ರವಾಗಿದೆ. ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದರೆ ವಿದ್ಯಾರ್ಥಿಗಳು ಮತದಾನದ ಮಹತ್ವ ಅರಿತು, ಮತದಾನ ಪ್ರಕ್ರಿಯೆಗಳಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಉತ್ತಮ ರಾಷ್ಟ್ರ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ಪ್ರಮುಖವಾಗಿದೆ ಎಂದರು. ಪ್ರಾಚಾರ್ಯ ಪ್ರೊ. ಎಸ್.ವಿ. ದಂಡನಾಯ್ಕರ್ ಮಾತನಾಡಿ, 18 ವರ್ಷ ಪೂರೈಸಿದ ಪ್ರತಿಯೊಬ್ಬರೂ ಮತದಾನದ ಹಕ್ಕು ಪಡೆದುಕೊಳ್ಳಬೇಕು ಎಂದರು. ಉಪನ್ಯಾಸಕರಾದ ನೀಲಗಂಗಾ ಮಾದರ, ಗೀತಾ ಕಾಡದೇವರಮಠ, ಎಸ್.ವಿ. ಕಾಲಚಟ್ಟಿ ಮಾತನಾಡಿದರು. ಉಪನ್ಯಾಸಕರದ ಪ್ರೊ.ವೀರೇಶ ಜಾಲಿಹಾಳ, ನಾಗೇಶ ಮುಗಳಿ, ಉಮೇಶ ಇದ್ದರು. ಚೈತ್ರಾ ನಿರೂಪಿಸಿದರು. ಮೇಟಿ ಸ್ವಾಗತಿಸಿದರು. ಸುಮಂಗಲಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net