ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ಹೆಸರು ತರಲಿ

ANKOLA PURSKAR
Published on

ಅಂಕೋಲಾ: ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆದಾಗ ವಿದ್ಯಾರ್ಥಿನಿಯರದ್ದೇ ಮೇಲುಗೈ ಎಂಬ ಫಲಿತಾಂಶ ಬಂದಾಗ ಪಾಲಕರಿಗೆ ಅಷ್ಟೇ ಅಲ್ಲದೇ ಸಮಾಜಕ್ಕೂ ಕೂಡ ಹೆಮ್ಮೆ ಎನ್ನಿಸುತ್ತದೆ. ಅದೇ ರೀತಿ ನಮ್ಮ ಕ್ಷೇತ್ರ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಿ ನನ್ನ ಕ್ಷೇತ್ರದ ಹೆಸರನ್ನು ರಾಷ್ಟ್ರಮಟ್ಟದಲ್ಲಿ ತರುವಂತಾಗಬೇಕು ಎಂದು ಶಾಸಕ ಸತೀಶ ಸೈಲ್ ಹಾರೈಸಿದರು.

ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಾಯಿ ಗಾಂವಕರ, ಅಂಕೋಲಾ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷ ಮಂಜೇಶ್ವರ ಎಂ.ನಾಯಕ ಮಾತನಾಡಿದರು. ಮಾಜಿ ಶಾಸಕ ಕೆ.ಎಚ್. ಗೌಡ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಸುಜಾತಾ ಗಾಂವಕರ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಪಾಂಡುರಂಗ ಗೌಡ, ವಕೀಲ ಬಿ.ಡಿ. ನಾಯ್ಕ, ನಿವೃತ್ತ ಪ್ರಾಚಾರ್ಯ ಜಿ.ಪಿ. ನಾಯಕ, ಜಿಪಂ ಮಾಜಿ ಸದಸ್ಯ ಜಿ.ಎಂ. ಶೆಟ್ಟಿ, ವಿನೋದ ನಾಯಕ ಬಾಸಗೋಡ, ಪ್ರಮುಖರಾದ ಮಂಜುನಾಥ ಡಿ. ನಾಯ್ಕ, ಮೊನ್ನಪ್ಪ ನಾಯ್ಕ, ರಾಜು ಹರಿಕಂತ್ರ, ಜಗದೀಶ ಖಾರ್ವಿ, ಶಾಂತಿ ಆಗೇರಿ, ಶೋಭಾ ನಾಯ್ಕ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net