

ಮಸ್ಕಿ: ಇತ್ತೀಚಿನ ದಿನಗಳಲ್ಲಿ ಪ್ರೌಢಶಾಲೆ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಕಳವಳಕಾರಿ ಸಂಗತಿ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನ ಜಾಗೃತಿ ಸಮಿತಿ ಜಿಲ್ಲಾ ಅಧ್ಯಕ್ಷ ಎಂ.ಅಮರೇಶ ಹೇಳಿದರು.
ಉದ್ಬಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿಶ್ವ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
ತಾಲೂಕು ಯೋಜನಾಧಿಕಾರಿ ಜಗದೀಶ ಭಂಡಾರಿ, ಶಾಂತಪ್ಪ, ಮಸ್ಕಿ ಪುರಸಭೆ ನಾಮನಿರ್ದೇಶಿತ ಸದಸ್ಯ ಕೃಷ್ಣ ಚಿಗರಿ, ಮುಖ್ಯಶಿಕ್ಷಕ ಆದಪ್ಪ ಹೆಂಬಾ, ಸಿದ್ದಲಿಂಗಯ್ಯ, ಅಮರಮ್ಮ, ನಾಗರತ್ನಾ ಇತರರಿದ್ದರು.