

ರೋಣ: ಈಜುಗೊಳ ಕಾಮಗಾರಿ ಪೂರ್ಣಗೊಳ್ಳಲು ವಿಳಂಬ ಮಾಡಬಾರದು. ನಿಗದಿತ ಅವಧಿಯೊಳಗೆ ಕಾಮಗಾರಿ ಮುಗಿಸಬೇಕು ಎಂದು ಕೆಆರ್‌ಡಿಎಲ್ ಏಜೆನ್ಸಿ ಪ್ರಮುಖರಿಗೆ ಯುವಜನ ಸಬಲೀಕರಣ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶರಣು ಗೋಗೇರಿ ಸೂಚಿಸಿದರು.
ದ್ರೋಣಾಚಾರ್ಯ ತಾಲೂಕು ಕ್ರೀಡಾಂಗಣಕ್ಕೆ ಬುಧವಾರ ಭೇಟಿ ನೀಡಿದ ಅವರು, 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈಜುಗೊಳ ಕಾಮಗಾರಿಯನ್ನು ವೀಕ್ಷಿಸಿದರು. ನಂತರ ಒಳಾಂಗಣ ಕ್ರೀಡಾಂಗಣದಲ್ಲಿ ನಿರ್ಮಿಸಿರುವ ಜಿಮ್ ಕೊಠಡಿಯನ್ನು ವೀಕ್ಷಿಸಿ, ಜಿಮ್ ಒಳಗಿನ್ ಮ್ಯಾಟ್‌ಗಳನ್ನು ಸ್ವಚ್ಛಗೊಳಿಸುವಂತೆ ಕೆಲಸಗಾರರಿಗೆ ಸೂಚಿಸಿದರು. ಕ್ರೀಡಾಂಗಣದಲ್ಲಿ ಸ್ವಚ್ಛತೆ ಹಾಗೂ ದನಕರುಗಳು ಬಾರದಂತೆ ಎಚ್ಚರ ವಹಿಸಬೇಕು ಎಂದು ಸೂಚಿಸಿದರು.