ಮಕ್ಕಳಲ್ಲಿನ ಪ್ರತಿಭೆ ಹೊರಹೊಮ್ಮಲಿ

Published on

ಬಳ್ಳಾರಿ; ಮಕ್ಕಳಲ್ಲಿರುವ ಅನೇಕ ರೀತಿಯ ಪ್ರತಿಭೆಗಳನ್ನು ಗುರುತಿಸಲು ಬೇಸಿಗೆ ಶಿಬಿರಗಳು ಅವಶ್ಯಕವಾಗಿದ್ದು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಭಾಗವಹಿಸಲು ಅನುಕೂಲಕರವಾಗಲಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆನಾಗಪ್ಪ ಹೇಳಿದರು.

ಇಲ್ಲಿನ ಕಂಟೋನ್‌ಮೆಂಟ್ ನ ಶಾಂತಿಧಾಮ ಆವರಣದ ಸರ್ಕಾರಿ ಬಾಲಕಿಯರ ಬಾಲಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ರಾಜ್ಯ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಹಯೋಗದೊಂದಿಗೆ ಮೇ 15 ರಿಂದ 29 ರವರೆಗೆ 05 ರಿಂದ 16 ವರ್ಷದ ಒಳಗಿನ ಮಕ್ಕಳಿಗೆ 15 ದಿನಗಳ ಕಾಲ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಾದ ಚಿತ್ರಕಲೆ, ಕರಕುಶಲೆ, ಸಮೂಹ ನೃತ್ಯ, ಸಮೂಹ ಗೀತೆ, ಕರಾಟೆ, ಯೋಗ ಇತ್ಯಾದಿ ಒಳಗೊಂಡಂತೆ ಗುರುವಾರ ಆಯೋಜಿಸಿದ್ದ ಬೇಸಿಗೆ ಶಿಬಿರ ಕಾರ್ಯಗಾರದ ಸಮಾರೋಪದಲ್ಲಿ ಮಾತನಾಡಿದರು.

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಮೈದೂರು ಮಾತನಾಡಿ, ಮಕ್ಕಳಲ್ಲಿ ವಿವಿಧ ಕಲೆಗಳ ಪ್ರತಿಭೆಯಿದ್ದು, ಅದನ್ನು ಸೂಕ್ತ ರೀತಿಯಲ್ಲಿ ಹೊರ ತರುವ ಕಾರ್ಯವಾಗಬೇಕು. ಇದಕ್ಕೆ ಬೆಂಗಳೂರಿನ ಬಾಲಭವನ ಸೊಸೈಟಿ ವತಿಯಿಂದ ಪ್ರತಿ ವರ್ಷ ಅನುದಾನ ಬಿಡುಗಡೆ ಮಾಡುತ್ತಿರುವುದರಿಂದ ಮಕ್ಕಳಿಗೆ ಪ್ರೋತ್ಸಾಹದಾಯಕವಾಗಿದೆ ಎಂದು ಹೇಳಿದರು.

ಬಳಿಕ ಬೇಸಿಗೆ ಶಿಬಿರ ಕಾರ್ಯಗಾರದಲ್ಲಿ ಭಾಗವಹಿಸಿದ ಎಲ್ಲ ಮಕ್ಕಳಿಗೆ ಪ್ರಶಂಸೆ ಪತ್ರ ನೀಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net