

ವಿಜಯವಾಣಿ ಸುದ್ದಿಜಾಲ ಅಮಾಸೆಬೈಲು ಎ.ಜಿ.ಕೊಡ್ಗಿ ಅವರಂತಹ ಹಿರಿಯ ಮುತ್ಸದ್ಧಿಗಳು ಸಮಾಜಕ್ಕೆ ಸಾರ್ವಕಾಲಿಕ ಮಾರ್ಗದರ್ಶಕರಾಗಿದ್ದು, ಅವರ ಬದುಕಿನ ಆದರ್ಶಗಳು, ಚಿಂತನೆಗಳು, ಸುಸ್ಥಿರ ಸಮಾಜಕ್ಕೆ ನಿತ್ಯ ಬೆಳಕಾಗಿವೆ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು. ಅಮಾಸೆಬೈಲು ಚಾರಿಟೆಬಲ್ ಟ್ರಸ್ಟ್, ಕರ್ಣಾಟಕ ಬ್ಯಾಂಕ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಮಾಸೆಬೈಲು ಗ್ರಾಪಂ, ಅಮಾಸೆಬೈಲು ವ್ಯವಸಾಯ ಸೇವಾ ಸಹಕಾರಿ ಸಂಘ, ಉಳ್ಳೂರು-ಮಚ್ಚಟ್ಟು ವ್ಯವಸಾಯ ಸೇವಾ ಸಹಕಾರಿ ಸಂಘ,ದಿ.ಎ.ಜಿ.ಕೊಡ್ಗಿ ಅಭಿಮಾನಿ ಬಳಗ ಸಹಯೋಗದಲ್ಲಿ ಅಮಾಸೆಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ ಆಯೋಜಿಸಿದ್ದ ದಿ.ಎ.ಜಿ.ಕೊಡ್ಗಿ ನೆನಪು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿದರು. ಮಂಗಳೂರು ಕರ್ಣಾಟಕ ಬ್ಯಾಂಕ್ ಎಂಡಿ ಮತ್ತು ಸಿಇಒ ರಾಘವೇಂದ್ರ ಎಸ್.ಭಟ್ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್‌ಕುಮಾರ್ ಎಸ್.ಎಸ್., ಶಾಸಕ ಕಿರಣ್‌ಕುಮಾರ್ ಕೊಡ್ಗಿ, ಪತ್ರಕರ್ತ ಕೆ.ಸಿ.ರಾಜೇಶ್, ಅಮಾಸೆಬೈಲು ಗ್ರಾಪಂ ಅಧ್ಯಕ್ಷೆ ಮಲ್ಲಿಕಾ ಕುಲಾಲ, ಅಮಾಸೆಬೈಲು ಸಹಕಾರಿ ವ್ಯವಸಾಯ ಸೇವಾ ಸಹಕಾರಿ ಸಂಘ ಅಧ್ಯಕ್ಷ ಸದಾನಂದ ಶೆಟ್ಟಿ, ಉಳ್ಳೂರು-ಮಚ್ಚಟ್ಟು ವ್ಯವಸಾಯ ಸೇವಾ ಸಹಕಾರಿ ಸಂಘ ಅಧ್ಯಕ್ಷ ರಾಜೇಶ್ ಹೆಬ್ಬಾರ್, ಕೋಟೇಶ್ವರ ಗೀತಾ ಎಚ್‌ಎಸ್‌ಎನ್ ಫೌಂಡೇಶನ್ ಅಧ್ಯಕ್ಷ ಶಂಕರ ಐತಾಳ್, ಶಾಲೆ ಮುಖ್ಯಶಿಕ್ಷಕ ಶಶಿಧರ ಶೆಟ್ಟಿ, ಎಸ್‌ಡಿಎಂಸಿ ಅಧ್ಯಕ್ಷ ಸುಕೇಶ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು. ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಅಶೋಕಕುಮಾರ್ ಕೊಡ್ಗಿ ಸ್ವಾಗತಿಸಿದರು. ನಿವೃತ್ತ ಉಪನ್ಯಾಸಕ ಶ್ರೀಕಾಂತ್ ಸಿದ್ದಾಪುರ ನಿರೂಪಿಸಿದರು. ಶೇಖರ್ ಯು. ವಂದಿಸಿದರು.
ಕೋಟತಟ್ಟು ಗ್ರಾಪಂಗೆ ಲಭಿಸಿದ ಉತ್ತಮ ಗ್ರಾಮ ಪಂಚಾಯಿತಿ ಪ್ರಶಸ್ತಿ, ನಗದು ಪುರಸ್ಕಾರವನ್ನು ಅಧ್ಯಕ್ಷ ಸತೀಶ್‌ಕುಂದರ್ ಬಾರಿಕೆರೆ, ಪಿಡಿಒ ರವೀಂದ್ರ ರಾವ್ ಅವರಿಗೆ ನೀಡಿ ಗೌರವಿಸಲಾಯಿತು. ಅಮಾಸೆಬೈಲು ಚಾರಿಟೆಬಲ್ ಟ್ರಸ್ಟ್‌ನಿಂದ ಅಮಾಸೆಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಬಸ್ ನಿರ್ವಹಣೆಗೆ ಕ್ಯಾಂಪ್ಕೋ ಅಧ್ಯಕ್ಷ ಎ.ಕಿಶೋರ್‌ಕುಮಾರ್ ಕೊಡ್ಗಿ ಚೆಕ್ ಹಸ್ತಾಂತರಿಸಿದರು. ಕೋಟೇಶ್ವರ ಹರ್ಷ-ಕಾವ್ಯ ದಂಪತಿ ಗಾನ ನಮನ ಹಾಗೂ ಕುಂಚ ನಮನ ಸಲ್ಲಿಸಿದರು.
ಎ.ಜಿ.ಕೊಡ್ಗಿಯವರು ನೇರ ನಡೆ-ನುಡಿಯನ್ನು ಹೊಂದಿದ್ದರು. ಸಮಾಜದ ಎಲ್ಲ ಕ್ಷೇತ್ರಗಳಲ್ಲೂ ಆಗಾಧವಾದ ಜ್ಞಾನ, ಅನುಭವ ಅವರಿಗಿತ್ತು. ಗ್ರಾಮೀಣಾಭಿವೃದ್ಧಿ ಬಗ್ಗೆ ವಿಶೇಷ ಚಿಂತನೆಗಳನ್ನು ಹೊಂದಿ ಅವುಗಳ ಪ್ರಾಯೋಗಿಕ ಅನುಷ್ಠಾನಕ್ಕೆ ತಮ್ಮದೇ ಮಾರ್ಗಗಳನ್ನು ಆಯ್ಕೆ ಮಾಡಿಕೊಂಡಿದ್ದರು. ಕೋಟ ಶ್ರೀನಿವಾಸ ಪೂಜಾರಿ, ಸಂಸದ