ಒಂದು ವರ್ಷದಲ್ಲಿ ತಂದಿರುವ ಅನುದಾನದ ಶ್ವೇತಪತ್ರ ಹೊರಡಿಸಲಿ

24 smg 5 hiremagaluru putta swamy
ಚಿಕ್ಕಮಗಳೂರು ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಮಾತನಾಡಿದರು.
Published on

ಚಿಕ್ಕಮಗಳೂರು: ಶಾಸಕ ಎಚ್.ಡಿ.ತಮ್ಮಯ್ಯ ಅವರು ಕಳೆದ ಒಂದು ವರ್ಷದಲ್ಲಿ ತಂದಿರುವ ಅನುದಾನದ ಬಗ್ಗೆ ಸುಳ್ಳು ಹೇಳಿಕೆ ನೀಡುತ್ತಿದ್ದು, ಎಷ್ಟು ಅನುದಾನ ತಂದಿದ್ದಾರೆ ಎಂಬ ಕುರಿತು ಶ್ವೇತಪತ್ರ ಹೊರಡಿಸಬೇಕು. ಜೊತೆಗೆ ಬಿಜೆಪಿ ಮುಖಂಡರೊAದಿಗೆ ಬಹಿರಂಗ ಚರ್ಚೆಗೆ ಬರಬೇಕು ಎಂದು ಬಿಜೆಪಿ ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಪಂಥಾಹ್ವಾನ ನೀಡಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಹಿರಂಗ ಚರ್ಚೆಗೆ ಶಾಸಕರೇ ದಿನಾಂಕ ನಿಗದಿಪಡಿಸಲಿ. ಅಂದು ಅವರು ಹೇಳಿದ ಮುಖಂಡರುಗಳೇ ಚರ್ಚೆಗೆ ಬರುವುದಾಗಿ ಹೇಳಿದರು.
ಶಾಸಕ ಎಚ್.ಡಿ.ತಮ್ಮಯ್ಯ ಅವರ ಒಂದು ವರ್ಷದ ಸಾಧನೆ ಶೂನ್ಯವಾಗಿದೆ. ಅವರು ಶ್ರಮ ಹಾಕಿ ಯಾವುದೇ ವಿಶೇಷ ಅನುದಾನ ತಂದಿಲ್ಲ. ಆದರೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಒಂದು ವರ್ಷದಲ್ಲಿ ೧೬೪ ಕೋಟಿ ರೂ. ಅನುದಾನ ತಂದಿz್ದೆÃನೆ ಎಂದು ಹೇಳುವ ಮೂಲಕ ಮತದಾರರಿಗೆ ಸುಳ್ಳು ಮಾಹಿತಿ ನೀಡಿದ್ದಾರೆ. ಹೀಗಾಗಿ ಅವರು ಕೂಡಲೇ ಶ್ವೇತಪತ್ರ ಬಿಡುಗಡೆ ಮಾಡಲಿ ಎಂದು ಒತ್ತಾಯಿಸಿದರು.
ಹೊಸ ಬಾಟಲಿಗೆ ಹಳೆ ಮದ್ಯ ಎನ್ನುವ ನಾಣ್ನುಡಿಯಂತೆ ಹಳೆ ಅಭಿವೃದ್ಧಿ ಕಾರ್ಯಗಳ ಮುಂದುವರೆದ ಕಾಮಗಾರಿಗಳಿಗೆ ಮಂಜೂರಾಗಿರುವ ಅನುದಾನವನ್ನು ಸೇರಿಸಿ ಒಂದು ವರ್ಷದ ಸಾಧನೆ ಎಂದು ಹೇಳಿ ಜನರನ್ನು ನಂಬಿಸುವ ಪ್ರಯತ್ನ ಮಾಡಲಾಗಿದೆ. ಮೆಡಿಕಲ್ ಕಾಲೇಜು, ನ್ಯಾಯಾಲಯ ಸಂಕೀರ್ಣ, ನ್ಯಾಯಾಧೀಶರ ವಸತಿ ಗೃಹ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳು ಸಿ.ಟಿ.ರವಿ ಅವರು ಶಾಸಕರಾಗಿದ್ದಾಗಲೇ ಮಂಜೂರಾಗಿದ್ದವು. ಅವುಗಳಿಗೆ ಹಂತಹAತವಾಗಿ ಅನುದಾನ ಬಿಡುಗಡೆ ಆಗುವುದು ಸಹಜ. ಆದರೆ ಅದೂ ಕೂಡ ನನ್ನ ಸಾಧನೆ ಎಂದು ಶಾಸಕರು ಹೇಳಿಕೊಂಡಿರುವುದು ಹಾಸ್ಯಾಸ್ಪದವಾಗಿದೆ ಎಂದು ಟೀಕಿಸಿದ್ದಾರೆ.
ಉಚಿತ ಭಾಗ್ಯಗಳನ್ನು ನೀಡುವ ಸಲುವಾಗಿ ಎಲ್ಲ ಕ್ಷೇತ್ರಗಳಲ್ಲಿ ಬೆಲೆ ಏರಿಕೆ ಮಾಡಿ ತೆರಿಗೆದಾರರು ನೆಲಕಚ್ಚುವಂತಾಗಿದೆ. ಸರ್ಕಾರದ ಖಜಾನೆ ಸಂಪೂರ್ಣ ಖಾಲಿಯಾಗಿದೆ. ಅಭಿವೃದ್ಧಿಗೆ ಸಧ್ಯಕ್ಕೆ ಅನುದಾನವಿಲ್ಲ. ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿ ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿರುವುದು ಪ್ರಕಟಗೊಂಡಿದೆ. ಇಂತಹ ಸಂದರ್ಭ ಅನುದಾನ ತಂದು ಅಭಿವೃದ್ಧಿ ಮಾಡಿz್ದÉÃನೆ ಎಂದು ಕ್ಷೇತ್ರದ ಶಾಸಕರು ನಂಬಿಸಲು ಯತ್ನಿಸಿರುವುದು ಮತದಾರರಿಗೆ ಮಾಡಿದ ದ್ರೋಹ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿ.ಟಿ.ರವಿ ಮತ್ತು ಸಗೀರ್ ಅಹ್ಮದ್ ಅವರು ಶಾಸಕರಾಗಿದ್ದಾಗ ಯಾವುದೇ ಇಲಾಖೆಗಳಲ್ಲಿ ಮಾಮೂಲಿ ವಸೂಲಿ ಇರಲಿಲ್ಲ. ಈಗ ಇವೆಲ್ಲಾ ಮಿತಿಮೀರಿವೆ. ಕಸಾಯಿ ಖಾನೆಗಳು ಮತ್ತೆ ತಲೆ ಎತ್ತಿವೆ ಎಂದು ದೂರಿದರು.
ಜಿಲ್ಲಾ ವಕ್ತಾರ ಸೋಮಶೇಖರಪ್ಪ ಮಾತನಾಡಿ, ಮೇ ೨೬ರಂದು ವಿಧಾನ ಪರಿಷತ್ ಚುನಾವಣೆ ಸಂಬAಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡಿ ಮತಯಾಚನೆ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಮಾಧ್ಯಮ ಪ್ರಮುಖ್ ಕೋಟೆ ದಿನೇಶ್, ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಚಿನ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net