ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳಲಿ

ಸೋಮವಾರಪೇಟೆ ಪಟ್ಟಣದ ಬಸವೇಶ್ವರ ರಸ್ತೆಯಲ್ಲಿ ಅಂಗನವಾಡಿ ಕಟ್ಟಡ ಕಾಮಗಾರಿಗೆ ಶಾಸಕ ಮಂತರ್ ಗೌಡ ಭೂಮಿ ನೆರವೇರಿಸಿದರು. ಜಯಂತಿ, ಮೋಹಿನಿ, ಮೃತ್ಯುಂಜಯ, ಶ್ರೀದೇವಿ ಇದ್ದರು.
ಸೋಮವಾರಪೇಟೆ ಪಟ್ಟಣದ ಬಸವೇಶ್ವರ ರಸ್ತೆಯಲ್ಲಿ ಅಂಗನವಾಡಿ ಕಟ್ಟಡ ಕಾಮಗಾರಿಗೆ ಶಾಸಕ ಮಂತರ್ ಗೌಡ ಭೂಮಿ ನೆರವೇರಿಸಿದರು. ಜಯಂತಿ, ಮೋಹಿನಿ, ಮೃತ್ಯುಂಜಯ, ಶ್ರೀದೇವಿ ಇದ್ದರು.
Published on

ಸೋಮವಾರಪೇಟೆ: ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಪಟ್ಟಣದ ವಾರ್ಡ್-1ರ ಬಸವೇಶ್ವರ ರಸ್ತೆಯಲ್ಲಿ 20 ಲಕ್ಷ ರೂ.ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಅಂಗನವಾಡಿ ಕಟ್ಟಡಕ್ಕೆ ಶಾಸಕ ಮಂತರ್ ಗೌಡ ಸೋಮವಾರ ಭೂಮಿಪೂಜೆ ನೆರವೇರಿಸಿದರು.

ನಿಗದಿತ ಅವಧಿಯಲ್ಲಿ ಕಾಮಗಾರಿ ಆರಂಭಿಸಿ ಪೂರ್ಣಗೊಳಿಸಬೇಕು. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಮೇಲುಸ್ತುವಾರಿ ವಹಿಸಬೇಕು. ಮಳೆಗಾಲ ಆರಂಭವಾಗುವುದರೊಳಗೆ ತಳಪಾಯದ ಕಾಮಗಾರಿ ಪೂರ್ಣಗೊಳಿಸಬೇಕೆಂದು ಸೂಚಿಸಿದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್, ಉಪಾಧ್ಯಕ್ಷೆ ಮೋಹಿನಿ, ವಾರ್ಡ್ ಸದಸ್ಯ ಬಿ.ಆರ್.ಮೃತ್ಯುಂಜಯ, ಸದಸ್ಯರಾದ ಬಿ.ಸಿ.ವೆಂಕಟೇಶ್, ವಿನಿ, ಡಿ.ಯು.ಕಿರಣ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಿ.ಶ್ರೀದೇವಿ, ಜಿಲ್ಲಾ ವಿಕಲಚೇತನ ಅಧಿಕಾರಿ ವಿಮಲಾ, ಪ.ಪಂ. ಮುಖ್ಯಾಧಿಕಾರಿ ಸತೀಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net