

ಗುಳೇದಗುಡ್ಡ: ನಮ್ಮ ಪ್ರಾಚೀನ ಪರಂಪರೆ, ಸಂಸ್ಕೃತಿ ಹಾಗೂ ಇತಿಹಾಸವನ್ನು ತಿಳಿಸುವ ಸ್ಮಾರಕಗಳನ್ನು ನಾವು ಮುಂದಿನ ಪೀಳಿಗೆಗೆ ಉಳಿಸುವ ಕಾರ್ಯ ಮಾಡಬೇಕು ಎಂದು ಉಪನ್ಯಾಸಕ ಮಹೇಶ ಬಡಿಗೇರ ಹೇಳಿದರು.
ತಾಲೂಕಿನ ತೊಗುಣಶಿ ಗ್ರಾಮದಲ್ಲಿ ಭಂಡಾರಿ ಹಾಗೂ ರಾಠಿ ಮಹಾವಿದ್ಯಾಲಯದ ವತಿಯಿಂದ ಆಯೋಜಿಸಿರುವ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರದ ನಾಲ್ಕನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮದ ಇತಿಹಾಸ ಪ್ರಸಿದ್ಧ ಸ್ಥಳಗಳ ಮಹತ್ವ ಅರಿತುಕೊಳ್ಳಬೇಕು. ಅವುಗಳ ಬಗ್ಗೆ ಗ್ರಾಮದ ಜನರಿಗೆ ತಿಳಿವಳಿಕೆ ಮೂಡಿಸಿ ಅವುಗಳನ್ನು ಸಂರಕ್ಷಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಇತಿಹಾಸ ಪ್ರಾಧ್ಯಾಪಕ ಡಾ. ಬಸವರಾಜ ಚವಡಿ ಹಾಗೂ ಸಂಗಮೇಶ ಚಿಕ್ಕಾಡಿ ಮಾತನಾಡಿದರು. ಗ್ರಾಮದ ಕರಿಯಮ್ಮನ ದೇವಸ್ಥಾನ, ಆಂಜನೇಯ ದೇವಸ್ಥಾನ ಹಾಗೂ ಅಮರೇ ಅಮರೇಶ್ವರ ಮಠದ ಆವರಣವನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸಲಾಯಿತು.
ಮಹಾವಿದ್ಯಾಲಯದ ಎನ್‌ಎಸ್‌ಎಸ್ ಅಧಿಕಾರಿಗಳಾದ ಡಾ. ಮಂಜಣ್ಣ, ಡಾ. ನಾಗೇಂದ್ರ ಸ್ವಾಮಿ ಹಾಗೂ ಡಾ. ಗಿರೀಶ ಕುಮಾರ ಮತ್ತಿತರರಿದ್ದರು