ಕಾರ್ಮಿಕರಿಗೆ ನ್ಯಾಯಯುತ ವೇತನ ನೀಡಲಿ

25 MANVI 01
ಮಾನ್ವಿಯಲ್ಲಿ ಆಯೋಜಿಸಿದ್ದ ಸಿಐಟಿಯು ಜಿಲ್ಲಾ ಸಮ್ಮೇಳನವನ್ನು ಗ್ರಾಪಂ ನೌಕರರ ಸಂಘದ ಉಪಾಧ್ಯಕ್ಷ ಆರ್.ಎಸ್.ಬಸವರಾಜ ಉದ್ಘಾಟಿಸಿದರು. ಜಿಲ್ಲಾ ಅಧ್ಯಕ್ಷೆ ಎಚ್.ಪದ್ಮಾ, ಕಟ್ಟಡ ಕಾರ್ಮಿಕ ಸಂಘದ ಜಿಲ್ಲಾ ಅಧ್ಯಕ್ಷ ರುದ್ರಪ್ಪ ನಾಯಕ, ಜಂಟಿ ಕಾರ್ಯದರ್ಶಿ ಶಬ್ಬೀರ್, ಅಂಗನವಾಡಿ ಸಂಘದ ಜಿಲ್ಲಾ ಅಧ್ಯಕ್ಷೆ ವರಲಕ್ಷ್ಮೀ, ಸಿಐಟಿಯುವ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಎಸ್. ಶರಣಬಸವ, ಪ್ರಾಂತ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಕೆ.ಜಿ.ವೀರೇಶ ಇತರರಿದ್ದರು.
Published on

ಮಾನ್ವಿ: ಕಾರ್ಮಿಕರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ನ್ಯಾಯಯುತ ವೇತನ ನೀಡಬೇಕು ಎಂದು ಗ್ರಾಪಂ ನೌಕರರ ಸಂಘದ ಉಪಾಧ್ಯಕ್ಷ ಆರ್.ಎಸ್. ಬಸವರಾಜ ಹೇಳಿದರು.

ಪಟ್ಟಣದಲ್ಲಿ ಆಯೋಜಿಸಿದ್ದ ಸಿಐಟಿಯು ಜಿಲ್ಲಾ 8ನೇ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾರ್ಮಿಕರಿಗೆ ಕನಿಷ್ಠ 36 ಸಾವಿರ ರೂ. ವೇತನ ನೀಡಬೇಕು ಎಂದು ಹಲವು ವರ್ಷಗಳಿಂದ ಹೋರಾಟ ಮಾಡಿಕೊಂಡು ಬಂದರೂ ಸರ್ಕಾರಗಳು ಕಾರ್ಮಿಕರ ಬೇಡಿಕೆ ಈಡೇರಿಸುತ್ತಿಲ್ಲ.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭೂ ಸುಧಾರಣೆ ತಿದ್ದುಪಡಿ ಮಾಡುವ ಭರವಸೆ ನೀಡಿತ್ತು. ಭೂ ರಹಿತರಿಗೆ ಗೈರಾಣಿ ಭೂಮಿ ನೀಡುವ ಭರವಸೆ ನೀಡಿದ ಕಾಂಗ್ರೆಸ್ ಈಗ ಮರೆತಿದೆ. ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವಸತಿ ನಿವೇಶನ ನೀಡುತ್ತಿಲ್ಲ. ಬೆಲೆ ಏರಿಕೆಯಿಂದ ಕಾರ್ಮಿಕರು ಜೀವನ ನಡೆಸುವುದು ಕಷ್ಟವಾಗಿದೆ. ಆದ್ದರಿಂದ ದುಡಿಯುವ ವರ್ಗಕ್ಕೆ ವೇತನ ಹೆಚ್ಚಳದೊಂದಿಗೆ ಸೇವಾ ಭದ್ರತೆ ನೀಡಬೇಕು. ಮಹಿಳೆಯರ ಮೇಲಿನ ದೌರ್ಜನ್ಯಗಳು ನಿಲ್ಲಬೇಕು ಎಂದು ಆಗ್ರಹಿಸಿದರು.

ಆರ್‌ಎಸ್‌ಎಸ್ ಸಂಘಟನೆ ನೋಂದಣಿ ಮಾಡಿಲ್ಲ. ದೇಶಕ್ಕೆ ಅವರ ಕೊಡುಗೆ ಏನು? ಸಂವಿಧಾನ ಒಪ್ಪದ ಇವರಿಗೆ ದೇಶದ ಕಾಳಜಿ ಇಲ್ಲ ಎಂದು ದೂರಿದರು.

ಸಿಐಟಿಯು ತಾಲೂಕು ಅಧ್ಯಕ್ಷ ಎಚ್.ಶಫುದ್ದೀನ್ ಪೋತ್ನಾಳ, ಪ್ರಮುಖರಾದ ಮಲ್ಲಿಕಾರ್ಜುನ, ಶಕುಂತಲಾ, ಗೌಸುದ್ದೀನ್, ರೇಣುಕಮ್ಮ, ಯಂಕಪ್ಪ ಕೆಂಗಲ್, ಹನೀಫ್, ಗಿರಿಯಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net