ಯುವಜನರನ್ನು ಬಿಜೆಪಿಗೆ ಕರೆತರಲಿ

5
ಚಿಕ್ಕೋಡಿ ಬಿಜೆಪಿ ಸಭಾಗೃಹದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಸದಸ್ಯತ್ವ ಅಭಿಯಾನದ ಕಾರ್ಯಾಗಾರವನ್ನು ಮಾಜಿ ಶಾಸಕ ಸಂಜಯ ಪಾಟೀಲ ಉದ್ಘಾಟಿಸಿದರು. ಸತೀಶ ಅಪ್ಪಾಜಿಗೋಳ, ಡಾ.ರಾಜೇಶ ನೇರ್ಲಿ, ಶಾಂಭವಿ ಅಶ್ವತ್ಥಪುರ, ಬಸವರಾಜ ಹುಂದ್ರಿ ಉಪಸ್ಥಿತರಿದ್ದರು.
Published on

ಚಿಕ್ಕೋಡಿ: ಯುವಜನತೆ ಭಾರತೀಯ ಜನತಾ ಪಕ್ಷ ಸೇರಲು ಉತ್ಸುಕರಾಗಿದ್ದು, ಅವರನ್ನು ಸದಸ್ಯರನ್ನಾಗಿ ಮಾಡಿಕೊಳ್ಳಲು ಒಗ್ಗೂಡಿ ಕೆಲಸ ಮಾಡಬೇಕು ಎಂದು ಚಿಕ್ಕೋಡಿ ಜಿಲ್ಲಾ ಬಿಜೆಪಿ ಉಸ್ತುವಾರಿ ಸಂಜಯ ಪಾಟೀಲ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿ ಸಭಾಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಎಲ್ಲ ವರ್ಗಗಳು ಹಾಗೂ ವಿಶೇಷವಾಗಿ ಮಹಿಳೆಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಸದಸ್ಯರನ್ನಾಗಿಸುವ ಮೂಲಕ ಎಲ್ಲರನ್ನೂ ತಲುಪಬೇಕು ಎಂದರು.

ಬಿಜೆಪಿ ಚಿಕ್ಕೋಡಿ ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ ಮಾತನಾಡಿ, ಬಿಜೆಪಿ ಶಿಸ್ತಿಗೆ ಹೆಸರುವಾಸಿಯಾಗಿದ್ದು, ದೇಶದೆಲ್ಲೆಡೆ ಕುಟುಂಬ ರಾಜಕಾರಣಕ್ಕೆ ಮಣೆ ಹಾಕದೆ ಹೊಸ ಮುಖಗಳಿಗೆ ಅವಕಾಶ ನೀಡುತ್ತಿದೆ. ಹೀಗಾಗಿ ಪಕ್ಷದ ಕಾರ್ಯಕರ್ತರು ಸದಸ್ಯತ್ವ ಅಭಿಯಾನದ ಮೂಲಕ ಪಕ್ಷಕ್ಕೆ ಶಕ್ತಿ ತುಂಬಬೇಕು ಎಂದರು.

ಮಾಜಿ ಜಿಲ್ಲಾಧ್ಯಕ್ಷ ರಾಜೇಶ ನೇರ್ಲಿ, ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷ ಶಾಂಭವಿ ಅಶ್ವತ್ಥಪುರ, ಮುಖಂಡ ಬಸವರಾಜ ಹುಂದ್ರಿ, ಮಾಜಿ ಶಾಸಕ ಬಾಳಾಸಾಬ ವಡ್ಡರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಹಳಿಂಗಳೆ, ಅಮೃತ ಕುಲಕರ್ಣಿ, ಶಿವಾನಂದ ನವಿನಾಳೆ, ಸಂಜೀವ ಪಾಟೀಲ, ಜಿಲ್ಲೆಯ ಎಲ್ಲ ಮಂಡಲ ಹಾಗೂ ಮೋರ್ಚಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net