ಮಾದಕ ವ್ಯಸನದಿಂದ ಯುವಶಕ್ತಿ ಮುಕ್ತವಾಗಲಿ

ಚಿಕ್ಕ ಅಳುವಾರದ ಜ್ಞಾನಕಾವೇರಿ ಆವರಣದ ಹಾರಂಗಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಧ್ಯಾರ್ಥಿಗಳು ಭಾಗವಹಿಸಿದ್ದರು.
ಚಿಕ್ಕ ಅಳುವಾರದ ಜ್ಞಾನಕಾವೇರಿ ಆವರಣದ ಹಾರಂಗಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಧ್ಯಾರ್ಥಿಗಳು ಭಾಗವಹಿಸಿದ್ದರು.
Published on

ಕುಶಾಲನಗರ: ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಯುವಶಕ್ತಿಯ ಪಾತ್ರ ಪ್ರಮುಖವಾಗಿದ್ದು, ಅಂತಹ ಯುವ ಶಕ್ತಿಯನ್ನು ಮಾದಕ ವ್ಯಸನದಿಂದ ಮುಕ್ತರಾಗಿರುವ ಹೊಣೆಗಾರಿಕೆ ಪ್ರತಿಯೊಬ್ಬ ಭಾರತೀಯ ನಾಗರಿಕನ ಮೇಲಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಸೀನಪ್ಪ ಅಭಿಪ್ರಾಯಪಟ್ಟರು.

78ನೇ ಸ್ವಾತಂತ್ರ್ಯ ದಿನಾಚರಣೆ, ನಶಾಮುಕ್ತ ಭಾರತ ಅಭಿಯಾನ ಅಂಗವಾಗಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಕೊಡಗು ವಿಶ್ವವಿದ್ಯಾಲಯದಿಂದ ಚಿಕ್ಕಅಳುವಾರದ ಜ್ಞಾನಕಾವೇರಿ ಆವರಣದ ಹಾರಂಗಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಮಾದಕ ವ್ಯಸನದಿಂದಾಗುವ ದುಷ್ಪರಿಣಾಮಗಳ ಕುರಿತ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೇಶದ ಯುವಜನತೆಯನ್ನು ಗುರಿಯಾಗಿಸಿಕೊಂಡು ಹೊರ ರಾಷ್ಟ್ರಗಳಿಂದ ಬರುವ ಮಾದಕ ವಸ್ತುಗಳನ್ನು ತಡೆಗಟ್ಟುವ ಹೊಣೆಗಾರಿಕೆ ನಮ್ಮದಾಗಿದೆ. ದೇಶದ ಅತ್ಯಮೂಲ್ಯ ಸಂಪತ್ತು ನಮ್ಮ ಯುವ ಶಕ್ತಿ ಹಾದಿ ತಪ್ಪದಂತೆ ಕಾಪಾಡಿಕೊಳ್ಳಬೇಕು. ಕುಟುಂಬ ಮತ್ತು ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮವನ್ನುಂಟು ಮಾಡುವ ಇಂತಹ ಸಾಮಾಜಿಕ ಪಿಡುಗನ್ನು ಹೋಗಲಾಡಿಸುವ ನಿಟ್ಟಿನಲ್ಲಿ ನಾವು ಕಟಿಬದ್ಧರಾಗಬೇಕಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಆರಕ್ಷಕ ವೃತ್ತ ನಿರೀಕ್ಷಕ ರಾಜೇಶ್ ಕೊಟ್ಯಾನ್ ಮಾತನಾಡಿ, ಮಾದಕ ವ್ಯಸನ ಸಾಮಾಜಿಕ ಪಿಡುಗು. ಇದನ್ನು ತಡೆಗಟ್ಟಲು ಸಾಂಘಿಕ ಹೋರಾಟ ಅಗತ್ಯ. ಸದೃಢ ಮತ್ತು ಸ್ವಸ್ಥ ಸಮಾಜ ನಿರ್ಮಾಣವಾಗಬೇಕಾದರೆ ಮಾದಕ ವಸ್ತುಗಳ ಬಳಕೆಯನ್ನು ತಡೆಗಟ್ಟಬೇಕು. ಹಾಗಾಗಿ ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರು ಸಹಕರಿಸಬೇಕು ಎಂದರು.

ಉಪನ್ಯಾಸಕ ಎನ್.ಕೆ. ಸುದರ್ಶನ್ ಕುಮಾರ್, ಡಾ.ಜಮೀರ್ ಅಹಮದ್, ಪಿ.ಸಿ.ಮಂಜುನಾಥ್ ಗೌಡ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net