ಯುವಕರು ರಾಷ್ಟ್ರಸೇವೆಗೆ ಬದ್ಧರಾಗಲಿ

NRD NSS
ನರಗುಂದ ಯಡೆಯೂರ ಸಿದ್ದಲಿಂಗೇಶ್ವರ ಪ್ರಥಮ ದರ್ಜೆ ಕಲಾ ಹಾಗೂ ವಾಣಿಜ್ಯ ವಿದ್ಯಾಲಯ ಆಶ್ರಯದಲ್ಲಿ ಮಂಗಳವಾರ ಎನ್‌ಎಸ್‌ಎಸ್ ದಿನ ಆಚರಿಸಲಾಯಿತು.
Published on

ನರಗುಂದ: ಯುವಕರು ಸದಾಕಾಲ ರಾಷ್ಟ್ರಸೇವೆಗೆ ಬದ್ಧರಾಗಿರಬೇಕು ಎಂದು ಯಡೆಯೂರ ಸಿದ್ಧಲಿಂಗೇಶ್ವರ ಕಾಲೇಜ್ ಪ್ರಾಚಾರ್ಯ ಆರ್.ಬಿ. ಪಾಟೀಲ ಹೇಳಿದರು.

ಪಟ್ಟಣದ ಯಡೆಯೂರ ಸಿದ್ದಲಿಂಗೇಶ್ವರ ಪ್ರಥಮ ದರ್ಜೆ ಕಲಾ ಹಾಗೂ ವಾಣಿಜ್ಯ ವಿದ್ಯಾಲಯದ ಆಶ್ರಯದಲ್ಲಿ ಆಯೋಜಿಸಿದ್ದ ಎನ್‌ಎಸ್‌ಎಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಸ್ವಯಂ ಸೇವಕರು ಹಗಲಿರುಳು ಶ್ರಮಿಸುತ್ತಾರೆ. ಹೀಗಾಗಿ ಸಮಾಜದಲ್ಲಿ ಗೌರವಯುತವಾಗಿ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದರು.

ಎನ್‌ಎಸ್‌ಎಸ್ ಕಾರ್ಯಾಕ್ರಮಾಧಿಕಾರಿ ಎಂ.ಈ. ವಿಶ್ವಕರ್ಮ ಮಾತನಾಡಿ, ಯುವಕರು ರಾಷ್ಟ್ರೀಯ ಸೇವಾ ಯೋಜನಯೆ ಸದುಪಯೋಗ ಪಡೆದುಕೊಂಡು ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಬೇಕು ಎಂದರು.

ಸ್ವಚ್ಛತೆ ಮತ್ತು ಆರೋಗ್ಯ ಕುರಿತು ಜಾಗೃತಿ ಜಾಥಾ ನಡೆಸಲಾಯಿತು. ಎಂ.ಪಿ. ಕ್ಯಾತನಗೌಡ್ರ, ಕಾಲೇಜಿನ ಎಲ್ಲ ಬೋಧಕ, ಬೋಧಕೇತರ ಸಿಬ್ಬಂದಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net