ಯುವಜನತೆ ಉತ್ತಮ ಹವ್ಯಾಸ ಬೆಳೆಸಿಕೊಳ್ಳಲಿ

Sindhnuru Tobbaco
ಸಿಂಧನೂರಿನ ಪಿಡಬ್ಲ್ಯುಡಿ ಕ್ಯಾಂಪ್‌ನಲ್ಲಿ ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ.ಟ್ರಸ್ಟ್‌ನಿಂದ ಹಮ್ಮಿಕೊಂಡಿದ್ದ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಯೋಗಗುರು ಎಂ.ಭಾಸ್ಕರ್ ಉದ್ಘಾಟಿಸಿದರು. ಪ್ರಮುಖರಾದ ವೆಂಕನಗೌಡ ವಟಗಲ್, ಬೀರಪ್ಪ ಶಂಭೋಜಿ, ಸಾವಿತ್ರಿ, ಸುಜಾತಾ, ವಾಣಿ ಎಸ್.ಖಾದ್ರಿ ಇತರರಿದ್ದರು.
Published on

ಸಿಂಧನೂರು: ಆರೋಗ್ಯಕರ ಜೀವನ ಸಾಗಿಸಲು ತಂಬಾಕು, ಮದ್ಯಪಾನ, ಗುಟ್ಖಾ ಸೇರಿದಂತೆ ಇತರ ದುಶ್ಚಟಗಳಿಂದ ದೂರವಿರಬೇಕು ಎಂದು ಎಂದು ಯೋಗಗುರು ಎಂ.ಭಾಸ್ಕರ್ ಹೇಳಿದರು.

ನಗರದ ಪಿಡಬ್ಲ್ಯುಡಿ ಕ್ಯಾಂಪ್‌ನಲ್ಲಿ ಭಾನುವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ.ಟ್ರಸ್ಟ್‌ನಿಂದ ಹಮ್ಮಿಕೊಂಡಿದ್ದ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಯುವಕರು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡು ಸುಂದರವಾದ ಬದುಕು ಕಟ್ಟಿಕೊಳ್ಳಬೇಕು ಎಂದು ಸಲಹೆ ನೀಡಿದರು. ಸಂಪನ್ಮೂಲ ವ್ಯಕ್ತಿ ವೆಂಕನಗೌಡ ವಟಗಲ್ ಮಾತನಾಡಿದರು. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಗೌರವ ಅಧ್ಯಕ್ಷ ಬೀರಪ್ಪ ಶಂಭೋಜಿ ಅಧ್ಯಕ್ಷತೆ ವಹಿಸಿದ್ದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಸಾವಿತ್ರಿ, ವಲಯದ ಮೇಲ್ವಿಚಾರಕಿ ಸುಜಾತಾ, ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ವಾಣಿ ಎಸ್.ಖಾದ್ರಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net