ಯುವಕರು ದುಶ್ಚಟಗಳಿಗೆ ಬಲಿಯಾಗದಿರಲಿ

24 ARKERA 01
ಅರಕೇರಾ ಶ್ರೀ ಸಿದ್ದಯ್ಯ ಹವಾಲ್ದಾರ್ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಪ್ರಾಚಾರ್ಯೆ ಬುದ್ದಿವಂತಿ ಉದ್ಘಾಟಿಸಿದರು. ಆರೋಗ್ಯ ಶಿಕ್ಷಣಾಧಿಕಾರಿ ಶಿವಪ್ಪ ನಾಯಕ ಭೂಮನಗುಂಡ, ಉಪನ್ಯಾಸಕರಾದ ನಿಂಗಪ್ಪ ಪೈಕಾರ, ಸರ್ವರ್ ಖಾನ್, ಮೇಲ್ವಿಚಾರಕ ಅಮೀತ್, ಕೃಷಿ ಮೇಲ್ವಿಚಾರಕ ಹುಚ್ಚಪ್ಪ ರೆಡ್ಡಿ ಇದ್ದರು.
Published on

ಅರಕೇರಾ: ಯುವಕರು ಮನಸ್ಸನ್ನು ಹಿಡಿತದಲ್ಲಿಟ್ಟುಕೊಳ್ಳದಿದ್ದರೆ, ಭವಿಷ್ಯದ ಬದುಕನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಆರೋಗ್ಯ ಶಿಕ್ಷಣಾಧಿಕಾರಿ ಶಿವಪ್ಪ ನಾಯಕ ಭೂಮನಗುಂಡ ಹೇಳಿದರು.

ಪಟ್ಟಣದ ಶ್ರೀ ಸಿದ್ದಯ್ಯ ಹವಲ್ದಾರ್ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಾಲೇಜು ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಶನಿವಾರ ಮಾತನಾಡಿದರು.

ಯುವ ಪೀಳಿಗೆ ತಂಬಾಕು ಸೇವನೆ, ಡ್ರಗ್ಸ್, ಗಾಂಜಾ, ಅಫೀಮು, ಬೀಡಿ, ಸಿಗರೇಟ್ ನಂತಹ ಮಾದಕ ವಸ್ತುಗಳ ಸೇವನೆಯಿಂದ ದೂರವಿರಬೇಕು. ದುಶ್ಚಟಗಳಿಗೆ ಬಲಿಯಾಗದೇ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವ ಜವಾಬ್ದಾರಿ ಯುವ ಪೀಳಿಗೆ ಮೇಲಿದೆ. ಮಹಾತ್ಮ ಗಾಂಧೀಜಿಯವರು ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಗುರಿಯನ್ನು ಹೊಂದಿದ್ದರು. ಯುವಕರು ಅಭ್ಯಾಸದ ಅವಧಿಯಲ್ಲಿ ದುಶ್ಚಟಗಳ ಕಡೆ ಗಮನಹರಿಸಬಾರದು. ದುಶ್ಚಟಗಳಿಗೆ ದಾಸರಾದರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದರು.

ಪ್ರಾಚಾರ್ಯೆ ಬುದ್ದಿವಂತಿ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಗೆ ಒತ್ತು ನೀಡಬೇಕು. ಭವಿಷ್ಯದ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net